ನಾರಾಯಣ ಗುರುಗಳ ಆದರ್ಶ ಪಾಲನೆ

gan (10)
Published on

ಕುಂದಾಪುರ: ನಾರಾಯಣ ಗುರುಗಳ ಆದರ್ಶ, ಉನ್ನತ ಮೌಲ್ಯ ಅರಿತು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡಿದಾಗಲೇ ಜನ್ಮದಿನಾಚರಣೆ ನಿಜವಾದ ಸಾರ್ಥಕತೆ ಪಡೆದುಕೊಳ್ಳುತ್ತದೆ. ನಾರಾಯಣ ಗುರುಗಳ ವಿಶ್ವ ಮಾನವ ತತ್ವ ಪ್ರತಿಯೊಬ್ಬರು ಮನಗಾಣಬೇಕು. ಆ ಮೂಲಕ ಸೌಹಾರ್ದಯುತ ಬದುಕು ಸಾಧ್ಯ ಎಂದು ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್.ಗಂಗೊಳ್ಳಿ ಅಭಿಪ್ರಾಯಪಟ್ಟರು.

ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಲಾಯಿತು. ಸದಸ್ಯರಾದ ಶಂಕರ ಪೂಜಾರಿ, ಗೋಪಾಲ ಚಂದನ್, ರಾಮಚಂದ್ರ ಪೂಜಾರಿ, ಚಂದ್ರಕಾಂತ ಪೂಜಾರಿ, ವಸಂತ ಸುವರ್ಣ ಉಪಸ್ಥಿತರಿದ್ದರು. ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಜಿ.ಎ.ಆರ್.ಲಕ್ಷ್ಮಣ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net