ಆಹಾರ ಕೇಂದ್ರ ಪರಿಶೀಲನೆ

02Kush01
Published on


ಮಡಿಕೇರಿ: ಕುಶಾಲನಗರದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿರುವ ಮಹಿಳಾ ಪೌಷ್ಟಿಕ ಆಹಾರ ಉತ್ಪಾದನಾ ಕೇಂದ್ರಕ್ಕೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್ ಶುಕ್ರವಾರ ಭೇಟಿ ನೀಡಿ ಅಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಇದೇ ಆಹಾರ ಕೇಂದ್ರದ ಮೂಲಕ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಆಹಾರ ಪೂರೈಸಲಾಗುತ್ತದೆ. ಹೀಗಾಗಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರಿಗೆ ಶುದ್ಧ ಹಾಗೂ ಪೌಷ್ಟಿಕಾಂಶ ಆಹಾರವನ್ನು ಕ್ರಮಬದ್ಧವಾಗಿ ನೀಡುವಂತೆ ಸೂಚನೆ ನೀಡಿದರು. ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಜೆ. ವಿಮಲಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net