ಅಭಿವೃದ್ಧಿ ಕಾರ್ಯಕ್ಕೆ ರಾಜಕೀಯ ಬೆರೆಸಬೇಡಿ

23ark3
Published on

ಅರಕಲಗೂಡು: ಅಭಿವೃದ್ಧಿ ಕಾರ್ಯಗಳಿಗೆ ರಾಜಕೀಯ ಮಾಡಿ ಅಡ್ಡಿಪಡಿಸಿದರೆ ಸಹಿಸುವುದಿಲ್ಲ ಎಂದು ಶಾಸಕ ಎ.ಮಂಜು ಎಚ್ಚರಿಕೆ ನೀಡಿದರು.

ತಾಲೂಕಿನ ಕೊಣನೂರಿನಲ್ಲಿ ಫುಡ್ ಕೋರ್ಟ್ ನಿರ್ಮಾಣ ಕಾರ್ಯಕ್ಕೆ ಒಂದು ಸಮುದಾಯದ ಜನತೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶನಿವಾರ ಸ್ಥಳೀಯ ನಾಗರಿಕರು ಮತ್ತು ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ಬೀದಿ ಬದಿ ಉಪಹಾರ ನೀಡುವ ವ್ಯಾಪಾರಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಜಾಗದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಮೇರೆಗೆ 23 ಲಕ್ಷ ರೂ. ವೆಚ್ಚದಲ್ಲಿ ಫುಡ್ ಕೋರ್ಟ್ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕೆಲವರು ರಾಜಕೀಯ ಅನುಕೂಲಕ್ಕೆ ಕಾಮಗಾರಿಗೆ ಅಡ್ಡಿಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಅಭಿವೃದ್ಧಿ ಕೆಲಸಗಳಿಗೆ ಯಾರೂ ಕೂಡ ರಾಜಕೀಯ ಮಾಡುವುದು ತರವಲ್ಲ ಎಂದು ಎಚ್ಚರಿಸಿದರು.

ರುಚಿಯಾದ ಆಹಾರ ಪದಾರ್ಥಗಳು ಒಂದೇ ಸೂರಿನಡಿ ದೊರಕಲಿ ಹಾಗೂ ಗ್ರಾಮ ಪಂಚಾಯಿತಿಗೆ ಕಂದಾಯ ಬರುವಂತಾಗಲಿ ಎನ್ನುವ ಉದೇಶದಿಂದ ಫುಡ್‌ಕೋರ್ಟ್ ಸ್ಥಾಪಿಸಲಾಗುತ್ತಿದೆ. ಸರ್ಕಾರದ ಈ ಯೋಜನೆ ಒಂದೇ ಸಮುದಾಯಕ್ಕೆ ಮೀಸಲು ಮಾಡಲು ಸಾಧ್ಯವಿಲ್ಲ. ಕೆಲವರು ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಸಮುದಾಯದ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ದುಷ್ಕೃತ್ಯಕ್ಕೆ ಮುಂದಾಗುತ್ತಿರುವುದು ಸರಿಯಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net