ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ

18 ckm 10
ಚಿಕ್ಕಮಗಳೂರಿನ ಜೀವನಸಂಧ್ಯಾ ವೃದ್ಧಾಶ್ರಮದಲ್ಲಿ ಸಿ.ಟಿ.ರವಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿಯಿಂದ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು. ಎಂ.ಆರ್.ದೇವರಾಜ ಶೆಟ್ಟಿ, ಪುಷ್ಪರಾಜ್, ಕೋಟೆ ರಂಗನಾಥ್, ಜೆಸಂತಾ ಅನಿಲ್‌ಕುಮಾರ್, ವೀಣಾ ಶೆಟ್ಟಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ೫೭ನೇ ಹುಟ್ಟು ಹಬ್ಬದ ಅಂಗವಾಗಿ ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಹಿರಿಯರ ಆಶೀರ್ವಾದ ಪಡೆಯಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ತಿಳಿಸಿದರು.

ನಗರದ ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ಗುರುವಾರ ನಗರ ಬಿಜೆಪಿ ಏರ್ಪಡಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿ.ಟಿ.ರವಿ ಅವರ ಜನ್ಮದಿನದ ಅಂಗವಾಗಿ ಪ್ರತೀ ವರ್ಷ ಜಿಲ್ಲಾ ಬಿಜೆಪಿ ಜಿಲ್ಲೆಯಾದ್ಯಂತ ವಿವಿಧ ರೀತಿಯ ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.
ಮಾಜಿ ಸಚಿವ ಸಿ.ಟಿ ರವಿ ಅವರ ಮುಂದಿನ ರಾಜಕಾರಣದಲ್ಲಿ ಉನ್ನತ ಹುದ್ದೆಗಳು ದೊರೆಯಲಿ ಹಾಗೂ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಾಗಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಜಿಲ್ಲೆಯಾದ್ಯAತ ಈ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ಸುಮಾರು ೭೦ಕ್ಕೂ ಹೆಚ್ಚು ವೃದ್ಧರಿಗೆ ಸಿ.ಟಿ ರವಿ ಅವರ ಹೆಸರಿನಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಇದಲ್ಲದೆ ಗಿಡ ನೆಡುವ ಕಾರ್ಯಕ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೆಸಂತಾ ಅನಿಲ್‌ಕುಮಾರ್ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅಭಿವೃದ್ಧಿ ಹರಿಕಾರರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಸಾಧನೆ ಮಾಡಿರುವ ಇವರ ಮುಂದಿನ ಭವಿಷ್ಯದಲ್ಲಿ ಉನ್ನತವಾದ ರಾಜಕೀಯ ಅಧಿಕಾರ ದೊರೆಯಲಿ ಹಾಗೂ ಅವರ ಆರೋಗ್ಯ ಚಿರಸ್ಥಾಯಿಯಾಗಿರಲಿ ಎಂದು ಹಾರೈಸಿದರು.
ಬಿಜೆಪಿ ಮುಖಂಡರಾದ ಕೋಟೆ ರಂಗನಾಥ್, ಸಿ.ಟಿ.ಜಯವರ್ಧನ್, ಪುಷ್ಪರಾಜು, ವೀಣಾಶೆಟ್ಟಿ, ಕೌಶಿಕ್, ಬಸವರಾಜ್, ಪವಿತ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net