ಬಡವರಿಗೆ ಆಹಾರ ಧಾನ್ಯ ವಿತರಣೆ

0102
Published on

ಬೆಳಗಾವಿ: ನಗರದ ನಾಗನೂರ ರುದ್ರಾಕ್ಷಿ ಮಠದಲ್ಲಿ ಡಾ. ಅಲ್ಲಮಪ್ರಭು ಶ್ರೀಗಳ ನೇತೃತ್ವದಲ್ಲಿ ಭಾನುವಾರ ಬಸವ ಜಯಂತಿ ನಿಮಿತ್ತ ಬಡವರಿಗೆ ಆಹಾರ ಧಾನ್ಯ ವಿತರಿಸಲಾಯಿತು.

ಬಳಿಕ ಮಾತನಾಡಿದ ಶ್ರೀಗಳು, 12ನೇ ಶತಮಾನದಲ್ಲಿ ಕ್ರಾಂತಿ ಮಾಡಿದ ಕಾಯಕಯೋಗಿ ಬಸವಣ್ಣನವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದರು. ಇದಕ್ಕೂ ಮುನ್ನ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿವೇಕಾನಂದ ಸ್ವಾಮೀಜಿ, ಶಿವಯೋಗಿ ಸ್ವಾಮೀಜಿ ಹಾಗೂ ಮಹಾಂತ ಸ್ವಾಮೀಜಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net