

ಹುಬ್ಬಳ್ಳಿ: ಇಲ್ಲಿನ ಬೆಂಗೇರಿಯ ಮಾರುತಿ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಡಿ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರ ಮೇಳವನ್ನು ಸರ್ವಧರ್ಮ ಸಮಾಜ ಸೇವಕ ಡಾ.ರಮೇಶ ಮಹಾದೇವಪ್ಪನವರ ಉದ್ಘಾಟಿಸಿದರು.
ನಂತರ ಮಾತಾನಾಡಿದ ಅವರು, ಆರೋಗ್ಯಕ್ಕೆ ಆಹಾರ ಬಹಳ ಮುಖ್ಯ. ಕಾರಣ ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರ ಸಿಗುವಂತೆ ಆಗಬೇಕು. ಇಂತಹ ಮೇಳದಿಂದ ಜನರಲ್ಲಿ ಜಾಗೃತಿ ಮೂಡುತ್ತದೆ ಮತ್ತು ಆರೋಗ್ಯ ಕಾಳಜಿ ಹೆಚ್ಚಾಗುತ್ತದೆ ಎಂದರು.
ಪಾಲಿಕೆ ಮಾಜಿ ಸದಸ್ಯ ಹೂವಪ್ಪ ದಾಯಗೋಡಿ, ಡಾ. ಸಂದೀಪ ಕುಲಕರ್ಣಿ, ಯೋಜನಾಧಿಕಾರಿಗಳು ಹಾಗೂ ಮಹಿಳಾ ಮಂಡಳದ ಸದಸ್ಯರು ಉಪಸ್ಥಿತರಿದ್ದರು.