ಪೆಂಡಾಲ್ ಗಣಪತಿ ಸೇವಾ ಸಮಿತಿಯಿಂದ ಅನ್ನಸಂತರ್ಪಣೆ

ಪೆಂಡಾಲ್ ಗಣಪತಿ ಸೇವಾ ಸಮಿತಿಯಿಂದ ಅನ್ನಸಂತರ್ಪಣೆ
Published on

ಹಾಸನ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಪೆಂಡಾಲ್ ಗಣಪತಿ ಸೇವಾ ಸಮಿತಿಯಿಂದ 71ನೇ ವರ್ಷದ ಗಣಪತಿ ವಿಸರ್ಜನೆ ಮಹೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಸಾರ್ವಜನಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಸುಮಾರು 8 ಸಾವಿರಕ್ಕು ಹೆಚ್ಚು ಜನರು ಪ್ರಸಾದ ಸ್ವೀಕರಿಸಿದರು. ಗಣಪತಿ ಸೇವಾ ಸಮಿತಿ ಅಧ್ಯಕ್ಷ ಡಾ.ಎಚ್.ನಾಗರಾಜು ಮಾತನಾಡಿ, ಆಗಸ್ಟ್ 27 ರಂದು 71ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ಸೆಪ್ಟೆಂಬರ್ 20ರವರೆಗೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶನಿವಾರ 30 ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಗಣಪತಿ ವಿಸರ್ಜನೆ ಮಾಡಲಾಗಿದೆ. ಗಣಪತಿ ವಿಸರ್ಜನೆ ಸಂಭ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್ ಗಿರೀಶ್ ಚನ್ನವೀರಪ್ಪ, ಉಪ ಮೇಯರ್ ಹೇಮಾಲತಾ ಕಮಲ್ ಕುಮಾರ್, ಶ್ರೀ ಗಣಪತಿ ಸೇವಾ ಸಮಿತಿ ಧರ್ಮದರ್ಶಿ ಲಲಾಟ್ ಮೂರ್ತಿ, ಬೂದೇಶ್, ಎಚ್.ಟಿ. ಶೇಖರ್, ಎಚ್.ಎಸ್. ಅನಂತನಾರಾಯಣ, ಎನ್.ಎಸ್. ಶಂಕರರಾವ್, ಎಚ್‌ಎಂಟಿ ಸುರೇಶ್ ಕುಮಾರ್, ಎಂ.ಕೆ. ಕಮಲ್ ಕುಮಾರ್, ಎಚ್.ಡಿ. ದೀಪಕ್, ಲೀಲಾಕುಮಾರ್, ಗಿರೀಗೌಡ, ಸಿ. ರಾಮಚಂದ್ರಯ್ಯ, ಕೆ.ಪಿ.ಎಸ್. ಪ್ರಮೋದ್, ಎಚ್.ಪಿ. ಕಿರಣ್, ಪಿ.ಆರ್. ನಾಗೇಂದ್ರ, ಸಿ.ಕೆ. ಪದ್ಮನಾಭ್, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಹನುಮಂತೇಗೌಡ, ವಿಷ್ಣು ಸೇನೆ ಜಿಲ್ಲಾಧ್ಯಕ್ಷ ಮಹಂತೇಶ್, ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net