ಆಹಾರ ಪದಾರ್ಥ: 753 ಕಡೆ ತಪಾಸಣೆ

food safety
Published on

ಬೆಂಗಳೂರು: ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ರಾಜ್ಯದ 753 ಕಡೆ ಶುಕ್ರವಾರ ತಪಾಸಣೆ ನಡೆಸಿದ್ದಾರೆ.

ಆಹಾರ ಪದಾರ್ಥಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇಲಾಖೆಯು ವಿಶೇಷ ಆಂದೋಲನ ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಹಾಗೂ ಬೀದಿ ಬದಿಯಲ್ಲಿನ ತಿನಿಸುಗಳನ್ನು ತಪಾಸಣೆ ನಡೆಸಿ, ಮಾದರಿಗಳನ್ನು ಸಂಗ್ರಹಿಸಲಾಗಿದೆ.

ಸಂಗ್ರಹಿಸಿದ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net