ಆಹಾರ ಸುರಕ್ಷತೆ ಅಧಿಕಾರಿ ನೇಮಕಕ್ಕೆ ಕ್ರಮ - ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ

DC Belgaum
Published on

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಹುಳು ಇದ್ದ ಆಹಾರ ನೀಡಲಾಗುತ್ತಿದೆ ಎಂಬ ವೀಡಿಯೋ ವೈರಲ್ ಆಗಿದೆ. ಈ ಕುರಿತು ಪರಿಶೀಲಿಸಿ ಬಿಮ್ಸ್ ನಿರ್ದೇಶಕರೊಂದಿಗೆ ಮಾತನಾಡಿದ್ದೇನೆ. ಆದರೆ, ಹುಳು ಇದ್ದ ಆಹಾರ ನೀಡಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಬಿಮ್ಸ್‌ನಲ್ಲಿ 24 ಗಂಟೆ ಕಾರ್ಯನಿರ್ವಹಿಸುವ ಆಹಾರ ಸುರಕ್ಷತೆ ಅಧಿಕಾರಿ ನೇಮಿಸುತ್ತೇನೆ ಎಂದು ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಮ್ಸ್ ನಿರ್ದೇಶಕರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಸುರಕ್ಷತೆ ಅಧಿಕಾರಿ ನೇಮಿಸುತ್ತೇನೆ ಎಂದರು.

ಗುಣಮುಖರಾಗಿ ಬಿಡುಗಡೆಗೊಂಡ ಕರೊನಾ ಸೋಂಕಿತರಿಗೆ 14 ದಿನಗಳ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗುತ್ತದೆ. ಅವಧಿ ಪೂರ್ಣಗೊಳಿಸಿದ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಿ ಸೋಂಕು ಇಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net