ನೋಂದಣಿ ಕೇಂದ್ರದಲ್ಲಿ ರೈತರಿಗೆ ಊಟದ ವ್ಯವಸ್ಥೆ

5- Nugge 1
Published on

ನುಗ್ಗೇಹಳ್ಳಿ: ನುಗ್ಗೇಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ಮರು ನೋಂದಣಿಗೆ ಆಗಮಿಸಿರುವ ರೈತರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಅವರು ಊಟ ಮತ್ತು ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್ ಮಂಗಳವಾರ ತಿಳಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ತಾಲೂಕಿನ ಚನ್ನರಾಯಪಟ್ಟಣ, ಬಾಗೂರು, ಹಿರೀಸಾವೆ, ಶ್ರವಣಬೆಳಗೊಳದಲ್ಲಿ ಕೊಬ್ಬರಿ ಖರೀದಿ ನೋಂದಣಿ ಕೇಂದ್ರಗಳಲ್ಲಿಯೂ ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ರಾಜ್ಯದಲ್ಲಿ ಇನ್ನೂ 50 ಸಾವಿರ ಮೆಟ್ರಿಕ್ ಟನ್ ಹೆಚ್ಚುವರಿ ಕೊಬ್ಬರಿ ಖರೀದಿಗೆ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿಳಿಸಲು ಬೆಂಗಳೂರಿಗೆ ತೆರಳಿದ್ದಾರೆ. ಅಲ್ಲದೆ, ರಾಜ್ಯದ ತೆಂಗು ಬೆಳೆಯುವ ಕ್ಷೇತ್ರದ ಮಂತ್ರಿಗಳು, ಶಾಸಕರ ನಿಯೋಗ ದೆಹಲಿಗೆ ತೆರಳಲು ಸಭೆ ಕರೆಯುವಂತೆಯೂ ದೇವೇಗೌಡರೊಂದಿಗೆ ಚರ್ಚಿಸಲಿದ್ದಾರೆ ಎಂದರು.


ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ದಯಾನಂದ್ ಮುಳ್ಕೆರೆ ಬಾಬು, ಎನ್.ಡಿ.ಶಿವಪ್ಪ, ಚಂದ್ರು ಯಾದವ್, ಬಸವನಪುರ ಸ್ವಾಮಿ, ಜೆ.ಮಾವಿನಹಳ್ಳಿ ಸುರೇಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net