ಮನೆಮನೆಗೆ ಆಹಾರ ಪೂರೈಕೆಗೆ ಪ್ರಯತ್ನ

Published on

ಮಂಗಳೂರು: ಲಾಕ್‌ಡೌನ್ ಸಂದರ್ಭ ತುರ್ತು ಆಹಾರ ವಸ್ತುಗಳ ಪೂರೈಕೆ ಸಂಬಂಧಿಸಿ ಶಾಸಕ ಡಿ.ವೇದವ್ಯಾಸ ಕಾಮತ್ ವಿವಿಧ ಆಹಾರ ಪೂರೈಕೆ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದರು.

ಕರೊನಾ ಭೀತಿ ಮುಂದಿನ ಕಠಿಣ ದಿನಗಳಿಗೆ ಸಾಕ್ಷಿಯಾಗಿದೆ. ಸದ್ಯ ದೇಶದಲ್ಲಿ ಆಹಾರ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸಗಳು ಆಗಿಲ್ಲ. ಆದರೆ ಸಂಪೂರ್ಣ ಲಾಕ್‌ಡೌನ್ ಸಂದರ್ಭ ಮನೆ ಮನೆಗೆ ಆಹಾರ ಸಾಮಗ್ರಿಗಳ ಪೂರೈಸುವುದು ಅನಿವಾರ್ಯವಾಗಬಹುದು. ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಶಾಸಕರು ಹೇಳಿದರು.

ಆಹಾರ ಪೂರೈಕೆ ಸಂಸ್ಥೆಯ ಸಿಬ್ಬಂದಿ ತಮ್ಮ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ವಹಿಸಬೇಕು. ಸದ್ಯ ಆಹಾರ ಸಾಮಗ್ರಿಗಳ ಪೂರೈಕೆ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಕರ್ಫ್ಯೂ ಜಾರಿಯಾದರೆ ಆಹಾರ ಪೂರೈಕೆದಾರ ಸಂಸ್ಥೆಗಳ ಮೂಲಕ ಮನೆ ಮನೆಗೆ ತಲುಪಿಸುವ ಯೋಜನೆಯಿದೆ ಎಂದು ಶಾಸಕರು ತಿಳಿಸಿದರು.

ವಿವಿಧ ಸಂಸ್ಥೆಗಳ ಪ್ರತಿನಿಧಿಗಳಾದ ಧರ್ಮರಾಜ್, ಅಭಿನವ್ ಕಿಣಿ, ವೈಶಾಖ್ ಪೈ, ಪ್ರಿನ್ಸ್ ಪಿಂಟೊ, ಲಕ್ಷ್ಮೀನಾರಾಯಣ ಶೆಣೈ, ಖಲಂದರ್ ಶೇಖ್, ದೀಕ್ಷಿತ್ ಶೆಟ್ಟಿ, ಸನತ್, ಧೀರಜ್ ಭಂಡಾರಿ, ಸುಮಿತ್, ಅಶೋಕ್.ಎ, ರಾಘವೇಂದ್ರ ಕುಂಬ್ಳೆ, ವಿನೋದ್ ಕಾಮತ್, ತೌಸಿಫ್ ಅಹಮ್ಮದ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net