ಅಮೃತಭಾರತಿ ಸಂಸ್ಥೆಯಲ್ಲಿ ಫುಡ್‌ಫೆಸ್ಟ್

amrutha
Published on

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಅಮೃತ ಆಸ್ವಾದ ಫುಡ್ ಫೆಸ್ಟ್ ನಡೆಯಿತು. ಉದ್ಯಮಿ ಪ್ರಜ್ವಲ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಅಮೃತ ಭಾರತಿ ಟ್ರಸ್ಟ್ ಸದಸ್ಯ ಬಾಲಕೃಷ್ಣ ಮಲ್ಯ, ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವಿನಯ್ ಶೆಣೈ ಸ್ವಾಗತಿಸಿದರು. ಗಗನ್ ರಾಜ್ ವಂದಿಸಿದರು. ಆದಿತ್ಯ ಶೆಟ್ಟಿ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರು ಮಾರ್ಗದರ್ಶನ ಮಾಡಿದರು. ವಿದ್ಯಾರ್ಥಿಗಳು ವ್ಯವಹಾರ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net