ಕಾಲುಬಾಯಿ ರೋಗ ಲಸಿಕಾ ಅಭಿಯಾನ

lxr AbhiyAna
Published on

ಲಕ್ಷೆ್ಮೕಶ್ವರ: ಪಟ್ಟಣದ ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ್ ಅವರ ನಿವಾಸದಲ್ಲಿ ಪಶುವೈದ್ಯಕೀಯ ಇಲಾಖೆ ವತಿಯಿಂದ ಜಾನುವಾರುಗಳಿಗೆ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಇದು ಜಾನುವಾರುಗಳಿಗೆ ಹಲವಾರು ರೋಗಗಳಿಗೆ ಕಾರಣವಾಗಬಹುದಾಗಿದೆ. ಆದರಿಂದ ಸರ್ಕಾರ ಜಾನುವಾರುಗಳಿಗೆ ಕಾಲು-ಬಾಯಿ ಲಸಿಕೆ ಪ್ರಾರಂಭಿಸಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ್, ಅಧಿಕಾರಿಗಳು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪುರಸಭೆಯ ಸದಸ್ಯರು ಮುಖಂಡರು ಪದಾಧಿಕಾರಿಗಳು ರೈತ ಬಾಂಧವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net