

ಚಿಕ್ಕಜಾಜೂರು: ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ಉಚಿತ ಕಾಲುಬಾಯಿ ಜ್ವರ ಲಸಿಕೆ ಅಭಿಯಾನಕ್ಕೆ ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ಜಿ.ಬಿ. ಶೇಖರಪ್ಪ ಚಾಲನೆ ನೀಡಿದರು.
ಡಿ.2ರ ವರೆಗೆ ಉಚಿತ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪಶುವೈದ್ಯರ ತಂಡ ತಾಲೂಕಿನ ಎಲ್ಲ ಮನೆಗಳಿಗೂ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದೆ. ಪ್ರತಿಯೊಬ್ಬ ರೈತರೂ ಇಲಾಖೆಯ ಉಪಯೋಗ ಬಳಸಿಕೊಳ್ಳುವಂತೆ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ. ರಂಗಸ್ವಾಮಿ ತಿಳಿಸಿದರು.
ಜಿ. ಬಿ. ಶೇಖರಪ್ಪ ಮಾತನಾಡಿ, ಸರ್ಕಾರ ರೈತರಿಗೆ ಇಲಾಖೆಯಿಂದ ಹಲವಾರು ಯೋಜನೆ ಜಾರಿಗೆ ತಂದಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಶಿಮೂಲ್ ಉಪ ವ್ಯವಸ್ಥಾಪಕ ಡಾ. ಮುಕುಂದ, ಚಿತ್ರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಶಿಕುಮಾರ್, ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ಹಾಗೂ ಶಿವಮೊಗ್ಗ ಹಾಲು ಒಕ್ಕೂಟದ ಸಿಬ್ಬಂದಿ ಇದ್ದರು.