ಸೆ. 26 ರಿಂದ ಕಾಲು ಬಾಯಿ ಲಸಿಕಾ ಕಾರ್ಯಕ್ರಮ

INDIA-VACCINATION-12_1647477679185_1657712425830_1657712425830.jpg
Published on

ಕಾರವಾರ: ಜಿಲ್ಲೆಯ ಪಶುಸಂಗೋಪನಾ ಇಲಾಖೆವತಿಯಿಂದ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಸೆ.26 ರಿಂದ ಅ.10 ವರೆಗೂ ಜಿಲ್ಲೆಯಾದ್ಯಂತ ಆಯೋಜಿಸಲಾಗಿದೆ.

ಏಕಕಾಲಕ್ಕೆ 30 ದಿನಗಳ ಕಾಲು ಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:22ರ ಯುವಕ ಗಣೇಶೋತ್ಸವದಲ್ಲಿ ಕುಣಿಯುತ್ತ ಕುಸಿದು ಬಿದ್ದು ಸಾವು; ಹಠಾತ್ ಹೃದಯಾಘಾತಕ್ಕೆ ಮತ್ತೊಂದು ಬಲಿ
ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 4,933 ಬ್ಲಾಕ್‌ಗಳನ್ನು ರಚಿಸಲಾಗಿದ್ದು, ಪ್ರತಿ ಬ್ಲಾಕ್‌ನಲ್ಲಿ ಅಂದಾಜು 100 ಜಾನುವಾರುಗಳಂತೆ, 252 ಲಸಿಕೆದಾರರು ಪ್ರತಿದಿನ ರೈತರ ಮನೆ ಮನೆಗೆ ತೆರಳಿ ಅಂದಾಜು 50-75 ಜಾನುವಾರುಗಳಿಗೆ ಲಸಿಕೆ ನೀಡಲಿದ್ದಾರೆ ಎಂದು ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಉಪನಿರ್ದೇಶಕ ರಾಕೇಶ ಬಾಂಗಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net