ಕಾರ್ಯಕರ್ತೆಯರಿಗೆ ಸೀರೆ ನೀಡಲು ಚಿಂತನೆ - ಶ್ರೀಮಂತ ಪಾಟೀಲ

Srimant
Published on

ಬೆಳಗಾವಿ: ಕರೊನಾ ವೈರಸ್ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆರ ಸೇವೆ ಯಾರೂ ಕೂಡ ಮರೆಯಲು ಸಾಧ್ಯವಿಲ್ಲ. ಜವಳಿ ಇಲಾಖೆ ಯಿಂದ ನೇರವಾಗಿ ನೇಕಾರ ರಿಂದ 6 ಲಕ್ಷ ಸೀರೆ ಖರೀದಿಸಿ ರಾಜ್ಯದ ಎಲ್ಲ ಅಂಗನ ವಾಡಿ ಹಾಗೂ ಆಶಾ ಕಾರ್ಯ ಕರ್ತೆಯರಿಗೆ ಕೊಡುಗೆ ರೂಪದಲ್ಲಿ ನೀಡಲು ಮುಂದಾಗಿದ್ದೇವೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಅವರು ಈ ಮಾಹಿತಿ ನೀಡಿದರು. ಇತ್ತೀಚೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರದ ನೀರಾವರಿ ಸಚಿವರ ಜತೆ ಮಾತುಕತೆ ನಡೆಸಿ, ಪ್ರವಾಹ ಪರಿಸ್ಥಿತಿ ಹಾಗೂ ಬೇಸಿಗೆಯಲ್ಲಿ ನೀರಿನ ತೊಂದರೆ ಆಗದಂತೆ ಸಹಕರಿಸಲು ಕೋರಿದ್ದಾರೆ. ಅವರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಸಚಿವ ಶ್ರೀಮಂತ ಪಾಟೀಲ ಅವರು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net