

ಮಾಂಜರಿ: ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಯಾಗಿರಲಿಲ್ಲ. ಅವರ ಸೇನೆಯಲ್ಲಿ 60 ಸಾವಿರ ಮುಸ್ಲಿಂ ಸೈನಿಕರಿದ್ದರು. 12 ಜಾತಿ ಸೇರಿಸಿ ಸ್ವರಾಜ್ಯ ನಿರ್ಮಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಂದಿನ ಯುವಕರಿಗೆ ಛತ್ರಪತಿ ಶಿವಾಜಿ ಮಹಾರಾಜರು ಸೂರ್ತಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಸಮೀಪದ ಸದಲಗಾ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆ ಉದ್ಘಾಟಿಸಿ ಮಾತನಾಡಿ, ಶಾಸಕ ಗಣೇಶ ಹುಕ್ಕೇರಿ ಹಾಗೂ ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಶಿವಾಜಿ ಮಹಾರಾಜರ ಪ್ರತಿಮೆಗೆ 25 ಲಕ್ಷ ರೂ. ನೀಡಿದ ಕಾರ್ಯ ಶ್ಲಾಘನೀಯ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಉತ್ತಮ ಪಾಟೀಲ, ವೀರಕುಮಾರ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ ಇತರರಿದ್ದರು.