ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಶನ್ ಪ್ರತಿಭಟನೆ

190220 Raichur AIDSO Protest for Laptop
Published on

ರಾಯಚೂರು: ಉಚಿತ ಲ್ಯಾಪ್‌ಟಾಪ್ ವಿತರಣೆ ವಿಳಂಬ ಖಂಡಿಸಿ ಹಾಗೂ ಸರ್ಕಾರಿ ಕಾಲೇಜಿನ ಪದವಿ ಎಲ್ಲ ವಿದ್ಯಾರ್ಥಿಗಳಿಗೂ ವಿತರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಡಿಸಿ ಕಚೇರಿ ಮುಂದೆ ಬುಧವಾರ ಪ್ರತಿಭಟಿಸಿದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸುವುದಾಗಿ ಘೋಷಿಸಿತ್ತು. ಆದರೆ, ಈ ವರ್ಷ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡಿ, ಉಳಿದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ. ಇನ್ನೂ ಮೂರು ತಿಂಗಳಲ್ಲಿ ಪದವಿ ಪೂರೈಸಿ ಹೊರ ಹೋಗುವ ವಿದ್ಯಾರ್ಥಿಗಳಿಗೂ ನೀಡುವುದರಿಂದ ಉನ್ನತ ಶಿಕ್ಷಣಕ್ಕೆ ಅನುಕೂಲ ಆಗಲಿದೆ. ಕೂಡಲೇ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಆದೇಶಿಸಬೇಕು, ಯಾವುದೆ ಕಾರಣಕ್ಕೂ ಯೋಜನೆ ಕೈ ಬಿಡಬಾರು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲರಿಗೂ ಲ್ಯಾಪ್‌ಟಾಪ್ ಸಿಗುವಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲು ಆಗ್ರಹಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ, ಕಾರ್ಯದರ್ಶಿ ಪೀರಸಾಬ್, ವಿದ್ಯಾರ್ಥಿಗಳಾದ ಆನಂದಗೌಡ, ರಾಕೇಶ್, ಗುರುರಾಜ, ರಾಮಲಿಂಗ ಸೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net