ಕೇಂದ್ರದ ಉತ್ತಮ ಆಡಳಿತಕ್ಕೆ ದೇಶಾದ್ಯಂತ ಬೆಂಬಲ

FotoJet (4)
Published on

ದೆಹಲಿ ತೀರ್ಪಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತಸ ಚಿಕ್ಕಬಳ್ಳಾಪುರದಲ್ಲಿ ವಿಜಯೋತ್ಸವ

ಚಿಕ್ಕಬಳ್ಳಾಪುರ: ದೆಹಲಿಯಲ್ಲಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.

ನಗರದ ಬಲಮುರಿ ಗಣಪತಿ ವತ್ತದಲ್ಲಿ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ, ಸಂಭ್ರಮಿಸಿದರು.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಉತ್ತಮ ಆಡಳಿತ ನಿರ್ವಹಣೆಗೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗುತ್ತಿದೆ. ಇದಕ್ಕೆ ಕೇಂದ್ರದ ಜತೆಗೆ ಅನೇಕ ರಾಜ್ಯಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ದೆಹಲಿಯಲ್ಲಿ 27 ವರ್ಷಗಳ ಬಳಿಕ ಪೂರ್ಣ ಬಹುಮತದೊಂದಿಗೆ ಬಿಜೆಪಿ ಗೆಲುವು ಸಾಧಿಸಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಬಿ.ಮುರಳಿ ಸಂತಸ ವ್ಯಕ್ತಪಡಿಸಿದರು.

ಕೇಂದ್ರ ಬಿಜೆಪಿ ಸರ್ಕಾರದ ಬಗ್ಗೆ ಕಾಂಗ್ರೆಸ್, ಎಎಪಿ ಸೇರಿ ರಾಜಕೀಯ ವಿರೋಧ ಪಕ್ಷಗಳು ಅಪಪ್ರಚಾರ ಕೈಗೊಂಡು ಜನರ ದಿಕ್ಕುತಪ್ಪಿಸಲು ಯತ್ನಿಸುತ್ತಿವೆ. ದೇಶದ ಅಭಿವೃದ್ಧಿ ಕೆಲಸಗಳಿಗೆ ಕೈಜೋಡಿಸದೇ ಜನವಿರೋಧಿ ಧೋರಣೆ ಅನುಸರಿಸುತ್ತಿವೆ. ಇದಕ್ಕೆ ಚುನಾವಣೆಯಲ್ಲಿ ಮತದಾರ ತಕ್ಕಪಾಠ ಕಲಿಸುತ್ತಿದ್ದು, ಇದಕ್ಕೆ ದೆಹಲಿಯಲ್ಲಿ ವ್ಯಕ್ತವಾದ ಜನರ ಮತ ತೀರ್ಪು ಒಂದು ನಿದರ್ಶನ. ಕಾಂಗ್ರೆಸ್‌ಗೆ 1 ಸೀಟು ಸಹ ಸಿಕ್ಕಿಲ್ಲ ಎಂದು ವ್ಯಂಗ್ಯವಾಡಿದರು.

ವಿಜಯೋತ್ಸವದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಲಕ್ಷ್ಮೀಪತಿ, ಅಶೋಕ್, ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮೀ ನಾರಾಯಣ ಗುಪ್ತ, ವಾಧ್ಯಮ ಸಂಚಾಲಕ ವಿ. ಮಧುಚಂದ್ರ, ರಾಜ್ಯ ಪರಿಷತ್ ಸದಸ್ಯರಾದ ನಾಯನಹಳ್ಳಿ ಶ್ರೀನಿವಾಸ್, ನರಸಪ್ಪ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಬಾಲಕೃಷ್ಣ, ಮುಖಂಡರಾದ ನರಸಪ್ಪ, ಕೊಂಡಪ್ಪ, ವೆಂಕಟೇಶ್, ನಂಜಪ್ಪ, ಲೋಕೇಶ್, ದೇವರಾಜ್, ಶಿವಕುವಾರ್,ರಾಜೇಶ್ ಜೈನ್, ಹರೀಶ್ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net