

ರಟ್ಟಿಹಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಮಕ್ಕಳಿಗೆ ಹೊರೆಯಾಗಬಾರದು ಎಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಗ್ರಾಮದ ಶಂಕ್ರಮ್ಮ ಹನುಮಂತಪ್ಪ ಕೋಡದ (56) ಆತ್ಮಹತ್ಯೆ ಮಾಡಿಕೊಂಡ ತಾಯಿ.
ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮಕ್ಕಳಿಗೆ ಆಸ್ಪತ್ರೆ ಖರ್ಚು ಸೇರಿ ನಾನು ಹೊರೆಯಾಗಬಾರದು ಎಂಬ ಕಾರಣಕ್ಕೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.