ಮಕ್ಕಳಿಗೆ ಭಾಷಾ ಜ್ಞಾನ ಅವಶ್ಯ

2Anand2
Published on

ಚಿಕ್ಕೋಡಿ: ವಿದ್ಯಾರ್ಥಿಗಳಲ್ಲಿ ಭಾಷಾ ಬಳಕೆ, ಸಂವಹನ, ಸಂಶೋಧನಾ ಪರಿಭಾಷೆ ಕುರಿತು ಸರಿಯಾದ ಅರಿವು ಇರಬೇಕು. ಜತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಭಗೀರಥ ಪ್ರಯತ್ನಶೀಲರಾಗಬೇಕು ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ರೋಹಿಣಿ ಜೆ. ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿಲ್ಲೆಯ ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 9ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಸತತ ಅಧ್ಯಯನದಿಂದ ಹೆಚ್ಚು ಪದವಿ ಪಡೆದರು ಎಂದು ಹೇಳಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕ ಶಿವರಾಜ ಅರಳಿ ಪ್ರಾಸ್ತಾವಿಕ ಮಾತನಾಡಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ನಿರ್ದೇಶನದಂತೆ ಪ್ರತಿ ತಿಂಗಳು ಉಪನ್ಯಾಸ ಹಮ್ಮಿಕೊಳ್ಳುತ್ತ ಬರುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಡು-ನುಡಿ ಬಗ್ಗೆ ಅಭಿಮಾನ ಮತ್ತು ಸಾಹಿತ್ಯದ ಅಭಿರುಚಿ ಬೆಳೆಯಲು ಸಹಕಾರಿಯಾಗಲಿದೆ ಎಂದರು.

ಪ್ರಾಚಾರ್ಯ ಎಂ.ಎಸ್.ಮಾಳಗೆ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ನಾಗರಾಜು ಕೆ., ವೈ.ಐ. ಜಮಾದಾರ, ದೇವೇಂದ್ರ ಮಂಡೇದ, ಉಮ್ಮೇಖುರ್ಷಿದ್ ದೊಡ್ಡಮನಿ, ಎ.ಸಿ ಪೂಜೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net