ಮಕ್ಕಳ ಕಲಿಕೆಗೆ ಪ್ರೋತ್ಸಾಹ ಅಗತ್ಯ

24 YLB 013
ಯಲಬರ್ಗಾ ತಾಲೂಕಿನ ಹಿರೇವಂಕಲಕುಂಟಾ ಸಕಿಪ್ರಾ ಶಾಲೆಗೆ ದಾಖಲಾದ ಮಕ್ಕಳಿಗೆ ನೋಟ್‌ಬುಕ್ ವಿತರಿಸಲಾಯಿತು.
Published on

ಯಲಬುರ್ಗಾ: ಮಕ್ಕಳನ್ನು ಪ್ರತಿನಿತ್ಯ ಅಂಗನವಾಡಿ ಶಾಲೆಗೆ ಕಳಿಸುವ ಮೂಲಕ ಪಾಲಕರು ಗುಣಾತ್ಮಕ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಅಂಗನವಾಡಿ ಮೇಲ್ವಿಚಾರಕಿ ಲಲಿತಾ ನಾಯ್ಕ ಹೇಳಿದರು.

ತಾಲೂಕಿನ ಹಿರೇವಂಕಲಕುಂಟಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಗನವಾಡಿಯಿಂದ ಪ್ರಾಥಮಿಕ ಶಾಲೆಗೆ ದಾಖಲಾದ ಮಕ್ಕಳ ಪ್ರವೇಶೋತ್ಸವ ಹಾಗೂ ಅಂಗನವಾಡಿ ಕೇಂದ್ರದಿಂದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಗಳು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಜತೆಗೆ ಬಾಲ್ಯದಲ್ಲಿ ಕಲಿಕೆಗೆ ಅವಶ್ಯವಿರುವ ಕಲಿಕಾ ಸಾಮಗ್ರಿ ನೀಡುವ ಮೂಲಕ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿವೆ. ಅವುಗಳ ಸದುಪಯೋಗ ಪಡಿಸಿಕೊಂಡು ವಿದ್ಯಾವಂತರಾಗಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ಬಸವರಾಜ ತಳವಾರ್ ಮಕ್ಕಳಿಗೆ ನೋಟ್‌ಬುಕ್ ವಿತರಿಸಿದರು. ಉಪಾಧ್ಯಕ್ಷ ಮಂಜುನಾಥ ಶಾಸ್ತ್ರಿ ಹಿರೇಮಠ ಮಕ್ಕಳಿಗೆ ಪುಷ್ಪ ನೀಡುವ ಮೂಲಕ ಸ್ವಾಗತಿಸಿದರು. ಮುಖ್ಯಶಿಕ್ಷಕರಾದ ಕನಕಪ್ಪ ಕಂಬಳಿ, ಮಲ್ಲಪ್ಪ ಮಾಸ್ತಿ, ಸುರೇಶ, ಅಂಗನವಾಡಿ ಕಾರ್ಯಕರ್ತೆಯರಾದ ಲಕ್ಷ್ಮೀ ಚಿಣಗಿ, ಭಾರತಿ ಹಾಳಕೇರಿ, ಅನ್ನಪೂರ್ಣಾ ಹಿರೇಮಠ, ಶ್ರೀದೇವಿ ಬಡಿಗೇರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net