ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಲಿ

1
ಅಥಣಿ ವಿದ್ಯಾವರ್ಧಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿದ್ಯಾರ್ಥಿಗಳು ಕೃಷ್ಣ, ರಾಧೆಯ ವೇಷಭೂಷಣದಲ್ಲಿ ಮಿಂಚಿದರು. ಶಿವಶಂಕರ ಹಂಜಿ, ಪ್ರಕಾಶ ಮಹಾಜನ, ವಿಜಯಕುಮಾರ ಬುರ್ಲಿ, ಅಶೋಕ ಬುರ್ಲಿ ಇತರರಿದ್ದರು.
Published on

ಅಥಣಿ: ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕಲು ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಸ್ಫೂರ್ತಿ, ಪ್ರೇರಣೆ ತುಂಬಬೇಕು ಎಂದು ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶಂಕರ ಹಂಜಿ ಹೇಳಿದರು.

ಪಟ್ಟಣದ ಶಂಕರ ನಗರದಲ್ಲಿರುವ ವಿದ್ಯಾವರ್ಧಕ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಹಮ್ಮಿಕೊಂಡಿದ್ದ ಮಕ್ಕಳ ಕೃಷ್ಣ ಹಾಗೂ ರಾಧೆ ವೇಷಭೂಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಏಳಿಗೆಯಲ್ಲಿ ಶಿಕ್ಷಕರ, ಪಾಲಕರ ಪಾತ್ರ ಬಹಳ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಆಸಕ್ತಿ ಗುರುತಿಸಿ ಪ್ರೋತ್ಸಾಹ ನೀಡಿ ಎಂದರು. ಉಪಾಧ್ಯಕ್ಷ ಪ್ರಕಾಶ ಮಹಾಜನ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೊಭಾವ ಬೆಳೆಸುವುದು ಅವಶ್ಯಕವಾಗಿದೆ. ಮೊಬೈಲ್ ಗೀಳು ಬಿಡಿಸಿ ಹೆಚ್ಚು ಚಟುವಟಿಕೆಯಲ್ಲಿ ತೊಡಗುವಂಥ ಕಾರ್ಯಗಳನ್ನು ಮಕ್ಕಳಿಂದ ಮಾಡಿಸಬೇಕು ಎಂದರು.

ನಿರ್ದೇಶಕರಾದ ವಿಜಯಕುಮಾರ ಬುರ್ಲಿ, ಅಶೋಕ ಬುರ್ಲಿ, ಶ್ರೀಶೈಲ ಸಂಕ, ಸುನೀಲ ಶಿವಣಗಿ, ಓಂಕಾರೆಪ್ಪ ಸಾವಡಕರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net