ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ

13
Published on

ಮೈಸೂರು: ಗೌರಿ-ಗಣೇಶ ಹಬ್ಬದ ಅಂಗವಾಗಿ ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಷನ್, ಕರುಣೆ ಸೇವಾ ಟ್ರಸ್ಟ್‌ನಿಂದ ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ ಅರ್ಪಿಸಲಾಯಿತು.

ನಗರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ಬಳಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಗಿನ ನೀಡಿದ ಬಳಿಕ ಮಾತನಡಿದ ಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷೆ ರುಕ್ಮಿಣಿ, ಯಾವುದೇ ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣೇಶನ ಪೂಜಿಸುವುದು ಹಿಂದು ಧರ್ಮಿಯರ ಪದ್ಧತಿ. ಇಂತಹ ಪವಿತ್ರ ಪೂಜಾ ಸ್ಥಾನ ಪಡೆದುಕೊಂಡಿರುವ ಗಣಪತಿಯನ್ನು ಪ್ರತಿಷ್ಠಾಪಿಸಿ ದೇಶದ ಆಚಾರ-ವಿಚಾರ, ಸಂಸ್ಕೃತಿ ಮುಂದುವರಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.

ಮೈಸೂರಿನ ಅರಮನೆ ಸುಂದರವಾಗಿಡಲು ಹಾಗೂ ಸ್ವಚ್ಛವಾಗಿ ಕಾಣಲು ಪೌರಕಾರ್ಮಿಕರ ಶ್ರಮ ಹೆಚ್ಚು. ಅಂತಹವರನ್ನು ಗುರುತಿಸಿ ಬಾಗಿನ ನೀಡಿರುವುದು ನಮಗೂ ಸಂತೋಷ ಉಂಟು ಮಾಡುತ್ತದೆ ಎಂದು ಹೇಳಿದರು.

ಬಾಗಿನ ಸ್ವೀಕರಿಸಿದ ಪೌರಕಾರ್ಮಿಕ ಮಹಿಳೆ ಜಯಲಕ್ಷ್ಮೀ ಮಾತನಾಡಿ, ಪೌರಕಾರ್ಮಿಕರನ್ನು ಗುರುತಿಸಿ, ಸಹೋದರಿಯಂತೆ ಬಾಗಿನ ನೀಡಿರುವುದು ನಮ್ಮೆಲ್ಲರಿಗೂ ಸಂತಸ ಉಂಟು ಮಾಡಿದೆ. ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಅಥರ್ವ ಸ್ಕಿಲ್ಸ್ ಫೌಂಡೇಷನ್ ಅಧ್ಯಕ್ಷೆ ಪುಷ್ಪಲತಾ, ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ರಾಧಾ ಶಿವರಾಜ್, ಶ್ರೀದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಆಯೋಜಕರಾದ ಮಂಜುಳಾ ಸೋಮಣ್ಣ, ಜ್ಯೋತಿ, ವರ್ಷಿಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net