

ಬೈಲಹೊಂಗಲ: ತಾಲೂಕಿನಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಸಲ್ ಬಿಮಾ ಯೋಜನೆ ಜಾರಿಯಲ್ಲಿದೆ.
ಈ ಯೋಜನೆಯಡಿ ನೋಂದಣಿ ಕಾರ್ಯ ಪ್ರಗತಿಯಲ್ಲಿದ್ದು, ರೈತರು ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಳ್ಳಲು ಪ್ರಮುಖ ಮುಂಗಾರು ಬೆಳೆಗಳಾದ ಸೋಯಾಬೀನ್ ಹಾಗೂ ಮುಸುಕಿನ ಜೋಳ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳು ಹೋಬಳಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾಗಿದ್ದು, ಎಲ್ಲ ಬೆಳೆಗಳಿಗೆ ವಿಮೆ ಮಾಡಿಸಲು ಜು.31 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಗ್ರಾಮಾಡಳಿತಾಧಿಕಾರಿಗಳ ಕಚೇರಿ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಂಪರ್ಕಿಸಿ ಬೆಳೆ ವಿಮೆ ಮಾಡಿಸಬಹುದಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.