ಸಾಂಸ್ಕೃತಿಕ ಚಟುವಟಿಕಗಳಿಗೆ ಆದ್ಯತೆ ಅಗತ್ಯ

17ATHANIGRAMIN1
Published on

ಅಥಣಿ ಗ್ರಾಮೀಣ: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಅಗತ್ಯ. ಹೀಗಾಗಿ, ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕಗಳು ನಿರಂತರವಾಗಿ ನಡೆಯಬೇಕು ಎಂದು ಶೇಗುಣಸಿ ವಿರಕ್ತಮಠದ ಡಾ.ಮಹಾಂತಪ್ರಭು ಸ್ವಾಮೀಜಿ ಹೇಳಿದರು.

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಶಾಂತಾಬಾಯಿ ಕುಮಠಳ್ಳಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಾತೃವಂದನಾ ಹಾಗೂ ಸಾಂಸ್ಕೃತಿಕ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪತ್ರಿಯೊಬ್ಬ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೇ ಒಳ್ಳೆಯ ಶಿಕ್ಷಣ ಹಾಗೂ ಸಂಸ್ಕಾರ ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಜಿಪಂ ಮಾಜಿ ಸದಸ್ಯ ಸಿದ್ದಪ್ಪ ಮುದಕಣ್ಣವರ ಮಾತನಾಡಿ, ಗ್ರಾಮೀಣ ಸೊಗಡಿನ ಕಲೆ, ಸಂಸ್ಕೃತಿ ಉಳಿವಿಗಾಗಿ ಜಾಗೃತಿ ಕಾರ್ಯಕ್ರಮ ಅವಶ್ಯಕವಾಗಿವೆ ಎಂದು ತಿಳಿಸಿದರು.

ಬೆಮುಲ್ ಮಾಜಿ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ, ವೀರಭದ್ರೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿನಾಯಕ ಕುಮಠಳ್ಳಿ, ಕೆಪಿಸಿಸಿ ಸದಸ್ಯ ಶಾಮರಾವ್ ಪೂಜಾರಿ, ಸಂಪನ್ಮೂಲ ಅಕಾರಿ ಯು.ಪಿ.ಸಾಲಿ, ಅರ್ಚನಾ ಕುಮಠಳ್ಳಿ, ಸುರೇಶ ಚಿಕ್ಕಟ್ಟಿ, ಜಿ.ಎ.ಖೋತ, ಮುತ್ತಯ್ಯ ಕಾಡದೇವರಮಠ, ಬಿ.ಗಿ.ಸಾರವಾಡ ಇತರರಿದ್ದರು. ಮಹಾಂತೇಶ ಭಜಂತ್ರಿ ಸ್ವಾಗತಿಸಿದರು. ರೇಣುಕಾ ಜಗತಾಪ ನಿರೂಪಿಸಿದರು. ಮೆರಾಜ ನಧಾಪ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net