ಆರ್ಥಿಕಾಭಿವೃದ್ಧಿಗೆ ಸಂಘಗಳು ಹೆಬ್ಬಾಗಿಲು

5
ಅಥಣಿ ಪಟ್ಟಣದ ಪ್ರಭುಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘವನ್ನು ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸಿದರು. ಶಾಸಕ ರಾಜು ಕಾಗೆ, ಡಾ.ಜಗದೀಶ ಗುಡಗುಂಟಿ, ಶಿವಬಸವ ಸ್ವಾಮೀಜಿ, ಪ್ರಭುಚನ್ನಬಸವ ಸ್ವಾಮೀಜಿ, ಮರುಳಸಿದ್ಧ ಸ್ವಾಮೀಜಿ, ಗಜಾನನ ಮಂಗಸೂಳಿ ಇತರರು ಇದ್ದರು.
Published on

ಅಥಣಿ: ಆರ್ಥಿಕಾಭಿವೃದ್ಧಿಗೆ ಸಹಕಾರಿ ಸಂಘಗಳು ಹೆಬ್ಬಾಗಿಲು ಇದ್ದಂತೆ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಸತ್ತಿ ರಸ್ತೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಭುಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ ಅಥಣಿ ಶಾಖೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಮಾತನಾಡಿ, ಸಕಾಲಕ್ಕೆ ಸಾಲ ಮರುಪಾವತಿಸಿದರೆ ಸಂಘ-ಸಂಸ್ಥೆಗಳು ಬೆಳೆಯಲು ಸಾಧ್ಯ ಎಂದರು. ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಜಗದೀಶ ಗುಡಗುಂಟಿ ಮಾತನಾಡಿ. ಗ್ರಾಹಕರಿಗೆ ಕಡಿಮೆ ಬಡ್ಡಿದರಲ್ಲಿ ತ್ವರಿತ ಸಾಲ ನೀಡಲಾಗುತ್ತಿದೆ ಎಂದರು.

ಆರ್‌ಎಸ್‌ಎಸ್ ಮುಖಂಡ ಅರವಿಂದರಾವ ದೇಶಪಾಂಡೆ ಮಾತನಾಡಿದರು. ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಉದ್ಘಾಟಿಸಿದರು. ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ, ಮುಖಂಡರಾದ ಗಜಾನನ ಮಂಗಸೂಳಿ, ಮಲ್ಲಿಕಾರ್ಜುನ ಕನಶೆಟ್ಟಿ, ನೇಮಣ್ಣ ಜಮಖಂಡಿ, ರಾಜೇಂದ್ರ ಗುಡಗುಂಟಿ, ವಿದ್ಯಾವತಿ ಮಳಲಿಮಠ, ಜಿಎಂ ಮಹೇಶ ಮಠಪತಿ, ಸತೀಶ ಬಡಿಗೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net