ಹಿರಿಯರ ಜೀವನ ಯುವಜನತೆಗೆ ಮಾದರಿ

04 SIRGUPPA 02
ಸಿರಗುಪ್ಪ ತಾಪಂ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶ ಆರ್.ಎಚ್.ಅಶೋಕ ಅವರು ಗುರುಬಸಪ್ಪಗೆ ವೃದ್ಧಾಪ್ಯ ವೇತನ ಪ್ರಮಾಣ ಪತ್ರ ವಿತರಿಸಿದರು. ತಹಸೀಲ್ದಾರ್ ಗೌಸಿಯಾ ಬೇಗಂ, ಇಒ ಪವನ ಕುಮಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಯು.ವೆಂಕೋಬ, ಸಂಪನ್ಮೂಲ ವ್ಯಕ್ತಿ ಜೆ.ನರಸಿಂಹ ಮೂರ್ತಿ ಇತರರಿದ್ದರು.
Published on

ಸಿರಗುಪ್ಪ: ಬದುಕಿಗೆ ದಾರಿ ಮಾಡಿಕೊಟ್ಟ ಮನೆಯ ಹಿರಿಯರ ಕೊನೆಗಾಲದ ಬದುಕನ್ನು ಹಸನಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಚ್.ಅಶೋಕ ಹೇಳಿದರು.

ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ತಾಪಂ, ನಗರ ಸಭೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಭದ್ರತೆ ಹಾಗೂ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿವರ್ಷ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನ ಆಚರಿಸುತ್ತಿದೆ. ಹಿರಿಯರಿಂದ ಬುದ್ಧಿವಂತಿಕೆ ಮತ್ತು ಮಾರ್ಗದರ್ಶನ ಪಡೆಯುತ್ತೇವೆ. ಅವರ ಜೀವನ ಅನುಭವದ ಪಾಠಗಳನ್ನು ಕಲಿಯುತ್ತೇವೆ ಎಂದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಯು.ವೆಂಕೋಬ ಮಾತನಾಡಿ, ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಜವಾಬ್ದಾರಿ. ವೃದ್ಧಾಪ್ಯ ಜೀವನವನ್ನು ಸುಖವಾಗಿ ಸಾಗಿಸಲು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net