ಅರ್ಹರಿಗೆ ಯೋಜನೆ ತಲುಪಲಿ

27Jaggu7
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆ ನಡೆಯಿತು. ಯೋಜನೆಗಳ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಗೋಪಾಲ ದಳವಾಯಿ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಇತರರಿದ್ದರು.
Published on

ಬೆಳಗಾವಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿವೆ. ಆದರೆ, ತಾಂತ್ರಿಕ ದೋಷ, ಜಾಗೃತಿ ಕೊರತೆಯಿಂದ ಕೆಲವು ತಾಲೂಕುಗಳಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆಗಳು ಪಡೆಯುವಲ್ಲಿ ಫಲಾನುಭವಿಗಳು ವಂಚಿತರಾಗುತಿದ್ದು, ಅಂತವರನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆಹಾರ ಇಲಾಖೆ ಸಂಬಂಧಿಸಿದಂತೆ ಪಡಿತರ ವಿತರಣೆಗೆ ಆಧಾರ್ ಜೋಡಣೆಯಲ್ಲಿ ವಿಳಾಸ, ಹೆಸರು ವ್ಯತ್ಯಾಸ, ಮೊಬೈಲ್ ಸಂಖ್ಯೆ ಲಿಂಕ್ ಇಲ್ಲದೇ ಇರುವ ತಾಂತ್ರಿಕ ತೊಂದರೆಗಳನ್ನು ಸರಿಪಡಿಸಿ ಕೂಡಲೇ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆ ತಲುಪಿಸಬೇಕು ಎಂದರು. ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಗೋಪಾಲ ದಳವಾಯಿ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಹೆಸ್ಕಾಂ, ಜಿಪಂ, ಸಾರಿಗೆ ಸಂಸ್ಥೆ, ಆಹಾರ ಇಲಾಖೆ ಜಿಲ್ಲಾ ಮಟ್ಟದ ಸಮಿತಿ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net