ಕೃಷಿಕರಿಗೆ ಅನುಕೂಲ ಕಲ್ಪಿಸಲಿ

18Ainapur3
Published on

ಐನಾಪುರ: ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಯೋಗೇಶ ಪಾಟೀಲ ಅವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಪ್ರಾಂತ್ಯದ ಸಹ ಸಂಘ ಸಂಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು.

ಶನಿವಾರ ಕೆಂಪವಾಡ ಸಕ್ಕರೆ ಕಾರ್ಖಾನೆಯ ಕಚೇರಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಯೋಗೇಶ ಪಾಟೀಲ ಅವರು ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದರು. ಈ ವೇಳೆ ಮಾಜಿ ಸಚಿವ ಶ್ರೀಮಂತ ಪಾಟೀಲ, ಮೋಹನರಾವ ಮುತಾಲಿಕ, ದಾದಾಗೌಡ ಪಾಟೀಲ, ಮಾರುತಿ ಮೋಹಿತೆ, ಕಾರ್ಖಾನೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net