ಕ್ಷೇತ್ರಾಭಿವೃದ್ಧಿಗೆ ಸಹಕರಿಸಲು ಮನವಿ

web3
ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಈಚೆಗೆ ಚರ್ಚಿಸಿದರು.
Published on

ಸವದತ್ತಿ: ಬೆಳಗಾವಿ ಚಳಿಗಾಲ ಅಧಿವೇಶನ ಸಮೀಪಿಸುತ್ತಿದ್ದಂತೆ ಶಾಸಕ ವಿಶ್ವಾಸ ವೈದ್ಯ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆ ಸಚಿವರನ್ನು ಬೆಂಗಳೂರಲ್ಲಿ ಈಚೆಗೆ ಖುದ್ದಾಗಿ ಭೇಟಿ ಮಾಡಿ, ಅವಶ್ಯಕತೆಗಳ ಕುರಿತು ಚರ್ಚಿಸಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಈಚೆಗೆ ಭೇಟಿ ಮಾಡಿ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ, ಪ್ರೌಢಶಾಲೆಗಳನ್ನು ಕಾಲೇಜುಗಳಾಗಿ ಉನ್ನತೀಕರಿಸಿ ಸವದತ್ತಿ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಮಾಲೋಚಿಸಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ದೇವಸ್ಥಾನ ಅಭಿವೃದ್ಧಿ, ಶಾಲೆಗಳ ಉನ್ನತೀಕರಣ, ಬಸ್ ಕೊರತೆ ಸೇರಿ ಹಲವು ಸಮಸ್ಯೆಗಳನ್ನು ಸಚಿವರ ಮುಂದಿಟ್ಟು ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸಮಸ್ಯೆ ಪರಿಹಾರಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ, ಸಿಬ್ಬಂದಿ ನೇಮಕ ಮತ್ತು ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net