ಆರೋಗ್ಯ ವೃದ್ಧಿಗೆ ಕ್ರೀಡೆ ಪೂರಕ

4Itagi1
Published on

ಇಟಗಿ: ಯುವಕರು ಯೋಗಾಭ್ಯಾಸ ಮತ್ತು ಕ್ರೀಡಾ ಚಟುವಟಿಕೆ ರೂಢಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳಬೇಕು ಎಂದು ಬಿಳಕಿ-ಅವರೊಳ್ಳಿ ರುದ್ರಸ್ವಾಮಿ ಮಠದ ಹೇಳಿದರು.

ಸಮೀಪದ ಮುಗಳಿಹಾಳ ಗ್ರಾಮದಲ್ಲಿ ರಾಜ್ಯೋತ್ಸವದ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಪ್ರಸ್ತುತದಲ್ಲಿ ಮೊಬೈಲ್ ಗೀಳಿಗೆ ಅಂಟಿಕೊಂಡು ಅಮೂಲ್ಯ ಸಮಯ ಕಳೆದುಕೊಳ್ಳುತ್ತಿರುವುದು ಖೇದಕರ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ಪಿಕೆಪಿಎಸ್ ಅಧ್ಯಕ್ಷ ಮಾರುತಿ ಟಕ್ಕೇಕರ ಮಾತನಾಡಿ, ಸ್ಪರ್ಧಾತ್ಮಕ ಮನೋಭಾವ ವೃದ್ಧಿಸಿಕೊಳ್ಳಲು ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಜ್ಯೋತಿಬಾ ಭರಮಪ್ಪನವರ, ಆತ್ಮಾನಂದ ಪಾಟೀಲ, ಮಂಜುನಾಥ ಅಷ್ಟೇಕರ, ಕಲ್ಲಪ್ಪ ರಂಗಣ್ಣವರ, ಸುನೀಲ

ಕೂಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net