ವಿಜ್ಞಾನ, ತಂತ್ರಜ್ಞಾನ ವಿಷಯಕ್ಕೆ ಒತ್ತು ನೀಡಿ

sapna naik
Published on


ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಪತ್ರಿಕೋದ್ಯಮ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಸಹ ಪ್ರಾಧ್ಯಾಪಕಿ ಪ್ರೊ.ಸ್ವಪ್ನಾನಾಯ್ಕಾ ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಕಾಲೇಜು ಹಳೇ ವಿದ್ಯಾರ್ಥಿ ಸಂಘ, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ಬುಧವಾರ ಆಯೋಜಿಸಿದ್ದ ಬಹು ಮಾಧ್ಯಮ ಕಾರ್ಯಾಗಾರದಲ್ಲಿ ಪತ್ರಿಕೋದ್ಯಮ ಮತ್ತು ವೃತ್ತಿಪರತೆ ವಿಷಯ ಕುರಿತು ಉಪನ್ಯಾಸ ನೀಡಿದರು.
ಸಮಾಜದಲ್ಲಿ ಬದಲಾವಣೆ ಬಯಸುವವರು ಮೊದಲು ತಾವು ಬದಲಾಗಬೇಕು. ಸಮಾಜದಲ್ಲಿನ ಬದಲಾವಣೆ ಅರಿತುಕೊಂಡು, ಬದಲಾವಣೆಗೆ ಹೊಂದಿಕೊಳ್ಳಬೇಕು. ಹೊಸತನ ಬೆಳೆಸಿಕೊಂಡರೆ ಮಾತ್ರ ಮುನ್ನಡೆಯಲು ಸಾಧ್ಯ. ಕಾಲೇಜಿನ ಹೊರಗೆ ಪತ್ರಿಕೋದ್ಯಮದ ನೈಜ ವಿಷಯದ ಅರಿವು ವಿದ್ಯಾರ್ಥಿಗಳಿಗೆ ಆಗಲಿದೆ ಎಂದರು.
ಪತ್ರಿಕೋದ್ಯಮದಲ್ಲಿ ಹೇರಳ ಪ್ರಮಾಣದಲ್ಲಿ ಉದ್ಯೋಗಾವಕಾಶ ಲಭ್ಯವಿದೆ. ಪದವಿ, ಪದಕ, ಅಂಕ ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರತಿಯೊಂದು ವಿಷಯದ ಜ್ಞಾನ ಹೊಂದುವುದರೊಂದಿಗೆ ಸವಾಲು ಮತ್ತು ಸ್ಪರ್ಧೆ ಎದುರಿಸಲು ಸನ್ನದ್ಧರಾಗಿರಬೇಕು. ವೃತ್ತಿಯಾಗಿ ತೆಗೆದುಕೊಳ್ಳುವವರು ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಿರಬೇಕೆಂದರು.
ಪತ್ರಕರ್ತ ಕಾರ್ತಿಕ್ ಭಟ್ಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಉಪಾಧ್ಯಕ್ಷ ನಾಟೋಳಂಡ ಚರ್ಮಣ್ಣ, ಪ್ರಧಾನ ಕಾರ್ಯದರ್ಶಿ ಬೊಳ್ಳಜೀರ ಬಿ.ಅಯ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಪಾಧ್ಯಕ್ಷ ವ್ನಿೇಶ್ ಎಂ.ಭೂತನಕಾಡು, ನಿರ್ದೇಶಕ ಕಿಶೋರ್ ರೈ ಕತ್ತಲೆಕಾಡು, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಕಾರ್ಯದರ್ಶಿ ಆನಂದ ಕೊಡಗು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಮೋನಿಕಾ, ಇಳಯರಾಜ, ವಿರಾಜಪೇಟೆ ಕಾವೇರಿ ಕಾಲೇಜು ಪತ್ರಿಕೋದ್ಯಮ ವಿಭಾಗ ಉಪನ್ಯಾಸಕ ಐನಂಡ ಸೋಮಣ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net