ಕಕಭಾಗಕ್ಕೆ ಮಾದರಿಯಾಗಲಿ ಉತ್ಸವ

28 SND 03
ಸಿಂಧನೂರು ನಗರಸಭೆ ಸಭಾಂಗಣದಲ್ಲಿ ಸಿಂಧನೂರು ದಸರಾ ಉತ್ಸವ ಲಾಂಛನ ಬಿಡುಗಡೆಗೊಳಿಸಲಾಯಿತು. ಜಿಲ್ಲಾಧಿಕಾರಿ ನಿತೀಶ ಕೆ.,ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಹೆಚ್ಚುವರಿ ಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿಎಸ್ ತಳವಾರ ಇತರರಿದ್ದರು.
Published on

ಸಿಂಧನೂರು: ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಆಚರಣೆಗೊಳ್ಳುತ್ತಿರುವ ದಸರಾ ಉತ್ಸವವು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಮಾದರಿ ದಸರಾ ಉತ್ಸವವಾಗುವಂತೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ ಕೆ. ಹೇಳಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಶನಿವಾರ ಸಿಂಧನೂರು ದಸರಾ ಉತ್ಸವ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು. ವಾರದೊಳಗೆ ಎಲ್ಲ ಆಯಾಮದಲ್ಲೂ ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಬೇಕಾದರೆ ಕೇವಲ ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಸಾಧ್ಯವಿಲ್ಲ.

ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೆ ಶ್ರಮಿಸಬೇಕು. ಸಿಂಧನೂರು ದಸರಾ ವಿಶೇಷ ಕಾರ್ಯಕ್ರಮವಾಗಬೇಕು. ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶುದ್ಧ ಆಹಾರ, ಶುದ್ಧನೀರು ಪೂರೈಸಬೇಕು. ವಿದ್ಯುತ್ ಸಂಪರ್ಕದ ಬಗ್ಗೆಯೂ ಗಮನವಿಟ್ಟುಕೊಳ್ಳಬೇಕು. ಅಗ್ನಿಶಾಮಕ, ಆರೋಗ್ಯ, ಜೆಸ್ಕಾಂ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು ಎಂದರು.

ಸಮಾಜದ ಬೇರೆ ಬೇರೆ ಜನರು, ವರ್ಗದವರು ಒಟ್ಟಾಗಿ ಸೇರಿ ಸಾಮರಸ್ಯದಿಂದ ಒಂದು ಗೂಡಿ ವಿಜೃಂಭಣೆಯಿಂದ ಸಿಂಧನೂರು ದಸರಾ ಉತ್ಸವ ಆಚರಿಸಬೇಕು. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದೆ. ವಿವಿಧ ಸಮಿತಿಗಳಿಗೆ ನೇಮಕವಾದ ಎಲ್ಲ ಅಧಿಕಾರಿಗಳು ಒಂದಾಗಿ ಕೆಲಸಮಾಡಬೇಕು ಎಂದರು.

ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಹೆಚ್ಚುವರಿ ಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿಎಸ್ ತಳವಾರ, ಲಿಂಗಸೂಗುರು ಸಹಾಯಕ ಆಯುಕ್ತ ಬಸವಣ್ಣಪ್ಪ ಕಲ್‌ಶೆಟ್ಟಿ, ತಹಸೀಲ್ದಾರ್ ಅರುಣ್ ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಪಂ ಇಒ ಚಂದ್ರಶೇಖರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net