ಕೆಆರ್‌ಎಸ್ ಬಳಿ ಗಣಿಗಾರಿಕೆಗೆ : ಜ. 2 ನೇ ವಾರಕ್ಕೆ ಅರ್ಜಿ ಮುಂದೂಡಿಕೆ

highcourt
Published on

ಬೆಂಗಳೂರು: ಕೆಆರ್‌ಎಸ್ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಸಲ್ಲಿಸಿಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 2 ನೇ ವಾರಕ್ಕೆ ಮುಂದೂಡಿದೆ
ಕೆಆರ್‌ಎಸ್ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಸಲ್ಲಿಸಿಲಾಗಿದ್ದ ಅರ್ಜಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ , ಪ್ರಾಯೋಗಿಕ ಸ್ಪೋಟಕ್ಕೆ ಅನುಮತಿ ನೀಡಲು ಅರ್ಜಿದಾರರು ಮನವಿ ಮಾಡಿದರು ಇದಕ್ಕೆ ಪ್ರತಿಕ್ರಯಿಸಿದ ಪೀಠ, ಸ್ಫೋಟಿಸಲು ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನೂ ಪರಿಗಣಿಸಬೇಕಾಗಿದೆ .ಕೆಆರ್‌ಎಸ್ ಪ್ರಮುಖ ಅಣೆಕಟ್ಟಾಗಿದ್ದು ಸೂಕ್ಷ್ಮ ವಿಷಯವಾಗಿದೆ. ಎಲ್ಲಾ ಅಂಶಗಳನ್ನು ಪರಿಶೀಲಿಸದೇ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ಸಾಧ್ಯವಿಲ್ಲ ಎಂದು ಹೇಳಿ ವಿಚಾರಣೆಯನ್ನು ಜನವರಿ ೨ ನೇ ವಾರಕ್ಕೆ ಮುಂದೂಡಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net