ಮೋದಿ ನಾಯಕತ್ವಕ್ಕೆ ವಿಶ್ವವೇ ಬೆರಗು

20SAVADATTI3
Published on

ಸವದತ್ತಿ: ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತದಂತಹ ಸಾಕಷ್ಟು ಯಶಸ್ವಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರಿಗೆ ಜಾಗತಿ ಮೂಡಿಸುವ ಅಗತ್ಯವಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ಎಸ್‌ವಿಎಸ್ ಬೆಳ್ಳುಬ್ಬಿ ಕಾಲೇಜಿನ ಸಭಾಂಗಣದಲ್ಲಿ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ತಾಲೂಕಾಡಳಿತ, ತಾಪಂ, ಶಿಶು ಅಭಿವದ್ಧಿ ಯೋಜನೆ, ಆರೋಗ್ಯ ಇಲಾಖೆ, ಹೆಸ್ಕಾಂ, ಪುರಸಭೆ, ಶಿಕ್ಷಣ ಇಲಾಖೆ, ಎಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಕೇಂದ್ರ ಸರ್ಕಾರದ ಯೋಜನೆಗಳ ವಿಶೇಷ ಜಾಗತಿ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಡೀ ವಿಶ್ವ ಭಾರತದೆಡೆಗೆ ಗಮನ ಹರಿಸುವಂತೆ ದೇಶ ಬೆಳೆದು ನಿಂತಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಗರೀಬ್ ಕಲ್ಯಾಣ ಯೋಜನೆ, ಪಿಎಂ ಪ್ರಣಾಮ್ ಯೋಜನೆ, ಉಜ್ವಲ, ಕಿಸಾನ್ ಸಮ್ಮಾನ್, ಪೋಷಣ್ ಅಭಿಯಾನ್‌ದಂಥ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಈಗಾಗಲೇ ಅನೇಕರು ಲಾನುಭವಿಗಳಾಗಿದ್ದಾರೆ. ಜನರಿಗೆ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ತಲುಪಬೇಕಿದೆ ಎಂದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ, ಜಲ ಜೀವನ ಮಿಷನ್, ಮಾತ ವಂದನಾ ಸೇರಿ ವಿವಿಧ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ, ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷೆ ದಾವಲಬಿ ಸನದಿ, ಆರೋಗ್ಯಾಧಿಕಾರಿ ಶ್ರೀಪಾದ್ ಸಬನೀಸ್, ಸಿಡಿಪಿಒ ಸುನೀತಾ ಪಾಟೀಲ, ಮುಖಂಡರಾದ ಪಂಚನಗೌಡ ದ್ಯಾಮನಗೌಡರ, ಸೌರಭ್ ಚೋಪ್ರಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net