ನವರಾತ್ರಿಗೆ ಯಲ್ಲಮ್ಮನಗುಡ್ಡ ಸಜ್ಜು

20ugl1
Published on

ಮಲ್ಲನಗೌಡ ಪಾಟೀಲ ಉಗರಗೋಳ

ಏಳುಕೊಳ್ಳದ ನಾಡು, ಉತ್ತರ ಕರ್ನಾಟಕದ ಪವಿತ್ರ ಧಾರ್ಮಿಕ ಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಈಗ ನವರಾತ್ರಿ ಸಡಗರ ಮನೆಮಾಡಿದೆ. ಒಂಭತ್ತು ದಿನಗಳ ಕಾಲ ನವರಾತ್ರಿ ಉತ್ಸವವನ್ನು ಸಂಭ್ರಮದಿಂದ ನೆರವೇರಿಸಲು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವದ್ಧಿ ಪ್ರಾಧಿಕಾರ ಸಜ್ಜಾಗಿದೆ.

ಘಟಸ್ಥಾಪನೆ ಸ್ಥಾಪನೆ: ಸೆ.22ರಂದು ಸಂಜೆ ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಭಕ್ತರ ಸಮ್ಮುಖದಲ್ಲಿ ಮೊದಲ ಘಟಸ್ಥಾಪನೆ ಸ್ಥಾಪಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಗಲಿದೆ. ಬಳಿಕ ಒಂಭತ್ತು ದಿನಗಳವರೆಗೆ ನಿತ್ಯ ಬೆಳಗ್ಗೆ ಮತ್ತು ಸಂಜೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ನೆರವೇರಲಿದೆ.

ಪ್ರತಿದಿನವೂ ಒಂದೊಂದು ಅವತಾರದಲ್ಲಿ ಸಾವಿರಾರು ಸೀರೆ ಬಳಸಿ, ದೇವಿಗೆ ಅಲಂಕಾರ ಮಾಡಲಾಗುತ್ತದೆ. ನವರಾತ್ರಿ ಉತ್ಸವದಲ್ಲಿ ಲ ಲ ಸಂಖ್ಯೆಯಲ್ಲಿ ಭಕ್ತಸಮೂಹ ಅಮ್ಮನ ಸನ್ನಿಧಿಗೆ ಬರುತ್ತದೆ. ನವರಾತ್ರಿ ಸಂದರ್ಭ ಗುಡ್ಡಕ್ಕೆ ಬರುವ ಪ್ರತಿ ಭಕ್ತರು ದೀಪಕ್ಕೆ ಎಣ್ಣೆ ಹಾಕುವುದು ವಾಡಿಕೆ. ಹಾಗಾಗಿ ಯಲ್ಲಮ್ಮ ದೇವಿಯ ಗರ್ಭಗುಡಿ ಎದುರು ಬಹತ್​ ದೀಪ ಅಳವಡಿಕೆ ಮಾಡಲಾಗಿದೆ.

ಕಳೆದ ವರ್ಷ 21 ಲಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದಿದ್ದರು. 1, 3, 5, 7 ಮತ್ತು 9ನೇ ದಿನಗಳಂದು ಗುಡ್ಡಕ್ಕೆ ಬರುವವರ ಪ್ರಮಾಣ ಗಣನೀಯವಾಗಿ ಇರಲಿದೆ. ಅ.1ರಂದು ಆಯುಧ ಪೂಜೆ ಇದ್ದು, 2ರಂದು ಬನ್ನಿ ಮುಡಿಯುವ ಮುಖಾಂತರ ಉತ್ಸವ ಸಮಾರೋಪಗೊಳ್ಳಲಿದೆ.

ಸುಲಭ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದೇವೆ. ಶುಚಿತ್ವಕ್ಕೆ ಒತ್ತು ಕೊಡುವ ಜತೆಗೆ, ಪ್ಲಾಸ್ಟಿಕ್​ ಬಳಕೆ ಸಂಪೂರ್ಣ ನಿಷೇಧಿಸಿದ್ದೇವೆ. ಗರ್ಭಿಣಿಯರು, ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಮಾಡಿದ್ದೇವೆ.

ಅಶೋಕ ದುಡಗುಂಟಿ ಕಾರ್ಯದರ್ಶಿ, ಯಲ್ಲಮ್ಮ ದೇವಸ್ಥಾನ ಅಭಿವದ್ಧಿ ಪ್ರಾಧಿಕಾರ

> ನವರಾತ್ರಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಎಲ್ಲ ತಯಾರಿ ಮಾಡಿಕೊಂಡಿದ್ದೇವೆ. ಭಕ್ತರಿಗೆ ಯಾವ ಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ. ಎಲ್ಲರೂ ಜಾತ್ರೆ ಸುಗಮವಾಗಿ ನಡೆಯಲು ಸಹಕಾರ ಕೊಡಬೇಕು. > ವಿಶ್ವಾಸ ವೆದ್ಯ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net