

ಯಾದಗಿರಿ: ಕರೊನಾ ವೈರಸ್ ಆತಂಕದ ಹಿನ್ನೆಲೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಸರ್ಕಾರದ ನಿಯಮಾವಳಿಗಳ ಪ್ರಕಾರ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಸೂಚಿಸಿದರು.
ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಹಿನ್ನೆಲೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 21ರಿಂದ 28ರ ವರೆಗೆ ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪ್ರಮಾಣಿತ ಕಾಯರ್ಾಚರಣೆ ವಿಧಾನ (ಎಸ್ಒಪಿ) ಮಾರ್ಗಸೂಚಿಯಂತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯಶಸ್ವಿಯಾಗಿ ನಿರ್ವಹಿಸಬೇಕು. ಕೋವಿಡ್-19 ಸೋಂಕಿನ ಹಿನ್ನೆಲೆ ಪರೀಕ್ಷೆಗೂ ಮುಂಚೆ ಮತ್ತು ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಜೇಷನ್ ಮಾಡಿಸಬೇಕು ಎಂದು ಸಲಹೆ ನೀಡಿದರು.
ಒಟ್ಟು 7,792 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಪರೀಕ್ಷಾ ಕೇಂದ್ರದ ಸಂಪೂರ್ಣ ಜವಬ್ದಾರಿಯು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿ ನೇಮಕವಾದವರದ್ದಾಗಿದೆ, ಎಸ್ಒಪಿ ಮಾರ್ಗಸೂಚಿಯ ನಿಯಮಗಳಂತೆ ಪರೀಕ್ಷೆ ನಡೆಸಲು ಎಲ್ಲ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವಾಗಿರುತ್ತದೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾಥರ್ಿಗಳ ಪಾಲಕರು ಗುಂಪು ಸೇರದಂತೆ ಕ್ರಮ ಪೊಲೀಸ್ ಇಲಾಖೆಯವರು ಕ್ರಮ ವಹಸಿಬೇಕು ಎಂದರು.
ಪರೀಕ್ಷಾ ಕಾರ್ಯಗಳಿಗಾಗಿ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಕೇಂದ್ರದಲ್ಲಿ ಉಪಸ್ಥಿತರಿರಬೇಕು, ಅನ್ಯರು ಪರೀಕ್ಷಾ ಕೇಂದ್ರದೊಳಗೆ ಕಂಡುಬಂದಲ್ಲಿ ಮುಖ್ಯ ಅಧೀಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.
ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಮಾಡಿ, ಪರೀಕ್ಷೆ ಕೇಂದ್ರಗಳಲ್ಲಿ ವಿದ್ಯಾಥರ್ಿಗಳಾಗಲಿ, ಸಿಬ್ಬಂದಿಯಾಗಲಿ ಮೋಬೈಲ್ ಫೋನ್ಗಳ ಬಳಕೆಗೆ ಸಂಪೂರ್ಣ ನಿಷೇಧಿಸಲಾಗಿದೆ. ವಿಶೇಷ ಜಾಗೃತದಳದ ಸದಸ್ಯರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಡಿಡಿಪಿಐ ಶ್ರೀನಿವಾಸ ರೆಡ್ಡಿ, ಸಾರಿಗೆ ಅಧಿಕಾರಿಗಳು, ಜಿಲ್ಲಾ ಖಜಾನೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿ ಎಲ್ಲ ತಾಲೂಕಿನ ಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿದ್ದರು.