

ಗುಡಿಬಂಡೆ: ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟಿಸಲಾಯಿತು.
ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಕೆ.ಎನ್.ಸೋಮಶೇಖರ್ ಮಾತನಾಡಿ, ತಾಲೂಕಿನಾದ್ಯಂತ ಈಗಾಗಲೇ 500 ಎಕರೆಗೂ ಹೆಚ್ಚು ಪ್ರದೇಶದಲ್ಲಿ ರೈತರು ವಿವಿಧ ಬೆಳೆ ಬೆಳೆದಿದ್ದಾರೆ. ಆದರೆ, ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಬೆಳೆಗೆ ನೀರು ಪೂರೈಸಲು ಆಗದೆ ಬೆಳೆಗಳು ಒಣಗುತ್ತಿವೆ. ಆದ್ದರಿಂದ ಕೂಡಲೇ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡಬೇಕು, ಟ್ರಾನ್‌ಸ್ಾರ್ಮರ್ ಬಳಿ ಇರುವ ಗಿಡಗಂಟಿಗಳನ್ನು ತೆರವುಗೊಳಿಸಬೇಕು. ವಿದ್ಯುತ್‌ಲೈನ್ ಹಾದುಹೋಗಿರುವ ಕಡೆ ಮರದ ರೆಂಬೆಗಳನ್ನು ತೆಗೆಸಬೇಕೆಂದು ಒತ್ತಾಯಿಸಿದರು.
ತಾಲೂಕು ಸಂಚಾಲಕ ರಾಮರೆಡ್ಡಿ ಮಾತನಾಡಿ, ತಾಲೂಕಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಯಾವುದೇ ನದಿ-ನಾಲೆಗಳಿಲ್ಲ, ವಿದ್ಯುತ್ ನಂಬಿ ಬೆಳೆಗಳನ್ನು ಬೆಳೆದಿದ್ದೇವೆ. ಆದರೆ ವಿದ್ಯುತ್ ಪೂರೈಕೆ ಸಮರ್ಪಕವಾಗಿರದ ಕಾರಣ ಸರಿಯಾಗಿ ಬೆಳೆಗಳಿಗೆ ನೀರು ಹಾಯಿಸಲಾಗದೆ ಒಣಗುತ್ತಿವೆ. ಒಮ್ಮೊಮ್ಮೆ ಮಾಹಿತಿ ನೀಡಿದೆ ಏಕಾಏಕಿ ಗಂಟೆಗಟ್ಟಲೇ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕಾರ್ಯದರ್ಶಿ ಭೂಪಾಲ್‌ರೆಡ್ಡಿ, ಜಿಲ್ಲಾ ಘಟಕ ಸದಸ್ಯ ಬಲರಾಮಪ್ಪ, ಗೌರವಾಧ್ಯಕ್ಷ ವೆಂಕಟರೋಣಪ್ಪ, ಮುಖಂಡರಾದ ಚೌಡರೆಡ್ಡಿ, ಬಿ.ಶ್ರೀನಿವಾಸ, ಲಕ್ಷ್ಮೀನಾರಾಯಣಪ್ಪ, ಗಂಗಿರೆಡ್ಡಿ, ರಾಮಾಂಜಿನಪ್ಪ, ಗಂಗಾಧರಪ್ಪ ಇತರರಿದ್ದರು.