ಗುಣಮಟ್ಟದ ಬೆಳೆಗೆ ಇಳುವರಿ ಹೆಚ್ಚು

2Anand3
Published on

ಬೆಳಗಾವಿ: ಕೃಷಿ ಭೂಮಿಯ ಮಣ್ಣು ಪರೀಕ್ಷಿಸಿ ಮಣ್ಣಿನ ಗುಣಮಟ್ಟದ ಮೇಲೆ ಬೆಳೆ ಬೆಳೆದರೆ ಇಳುವರಿ ಹೆಚ್ಚಾಗುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಹೇಳಿದರು.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದಲ್ಲಿನ ಕೆಎಲ್‌ಇ ಸಂಸ್ಥೆಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಶುಕ್ರವಾರ ಅಥಣಿಯ ಕೆಎಲ್‌ಇ ಸಂಸ್ಥೆಯ ಶ್ರೀಶಿವಯೋಗಿ ಮುರುೇಂದ್ರ ಸ್ವಾಮೀಜಿ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಕೇಂದ್ರದ ಆವರಣದಲ್ಲಿ ಅಳವಡಿಸಿದ ವಿವಿಧ ಪ್ರಾತ್ಯಕ್ಷಿಕೆ ತಾಕುಗಳಿಗೆ ಭೇಟಿದ ವೇಳೆ ಅವರು ಮಾತನಾಡಿದರು.

ವಿಜ್ಞಾನಿಗಳಾದ ಡಾ.ಎಸ್.ಎಸ್.ಹಿರೇಮಠ, ಎಸ್.ಎಮ್.ವಾರದ, ಜಿ.ಬಿ.ವಿಶ್ವನಾಥ, ಪ್ರವೀಣ ಯಡಹಳ್ಳಿ, ಪ್ರೊ.ಅಚುತಾನಂದ ಕೆ ಎಂ, ಪ್ರೊ.ಕಿರಣ ಮಾಡಲಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net