ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

0101
Published on

ಚಿಕ್ಕೋಡಿ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಚಿಕ್ಕೋಡಿಯ ಡಾ. ಭೀಮರಾವ ಅಂಬೇಡ್ಕರ್ ಸಾಮಾಜಿಕ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಮಿನಿ ವಿಧಾನಸೌಧ ಎದರು ಗುರುವಾರ ಪ್ರತಿಭಟಿಸಿದರು.

ನಾಲ್ವರು ದುಷ್ಕರ್ಮಿಗಳು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು ಖಂಡನೀಯ. ಕೃತ್ಯ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ, ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ನ್ಯಾಯವಾದಿ ಸುದರ್ಶನ ತಮ್ಮಣ್ಣವರ, ದಲಿತ ಮುಖಂಡ ಬಸವರಾಜ ಢಾಕೆ ಮಾತನಾಡಿ, ಉತ್ತರಪ್ರದೇಶದಲ್ಲಿ ದಲಿತ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲಿಯ ಸರ್ಕಾರ, ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಯುವತಿ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ನಿರಂಜನ ಕಾಂಬಳೆ, ಶಶಿಕಾಂತ ಫಕೀರೆ, ವಿಕ್ರಮ ಶಿಂಗಾಡೆ, ಜೀವನ ಮಾಂಜ್ರೇಕರ, ಸುಜಾತಾ ಕಾಂಬಳೆ, ವಿಠ್ಠಲ ಕಾಂಬಳೆ, ಮಧುಕರ ಮಜಲಟ್ಟಿ, ಉದಯ ವಾಘಮೋರೆ, ಗುಂಡು ಜ್ಯೋತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net