ಗ್ರಾಮೀಣರಿಗೆ ಆರೋಗ್ಯದ ಜ್ಞಾನ-ಅರಿವು ಮೂಡಿಸಿ

7 KURGODU 03
ಕುರುಗೋಡು ಸಮೀಪದ ಏಳುಬೆಂಚಿ ಗ್ರಾಪಂನಲ್ಲಿ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮ ನಡೆಯಿತು. ಗ್ರಾಪಂ ಅಧ್ಯಕ್ಷ ಹನುಮಂತಪ್ಪ, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ರಾಘವ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಜ್ಯೋತಿ, ಪಿಎಚ್ ಸಿ ಒ ಮಾನಸ ಇತರರಿದ್ದರು.
Published on

ಕುರುಗೋಡು: ಗ್ರಾಮೀಣರ ಆರೋಗ್ಯ ಉತ್ತಮ ಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಉಪಯುಕ್ತವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ರಾಘವ ಶೆಟ್ಟಿ ಹೇಳಿದರು.

ಸಮೀಪದ ಏಳುಬೆಂಚಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಜನರಿಗೆ ಆರೋಗ್ಯದ ಬಗ್ಗೆ ಜ್ಞಾನ ಮತ್ತು ಅರಿವು ಮೂಡಿಸುವುದು ಈ ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಇಂತಹ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ಸದಸ್ಯರು ವಾರ್ಡ್ ಸಭೆ ನಡೆಸಿ ಕ್ರಿಯಾ ಯೋಜನೆ ರೂಪಿಸಿ ಅರೋಗ್ಯ ತಪಾಸಣೆ ಶಿಬಿರ ನಡೆಸಬೇಕು. ಕಾಯಿಲೆಗಳು ದೃಢಪಟ್ಟಲ್ಲಿ ಉಚಿತ ಚಿಕಿತ್ಸೆ ಕೊಡಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net