

ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಗಾಯಕ ಕರುಣಾಕರನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತನ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ವಿಷಯ ತಿಳಿದೂ ಮರೆಮಾಚಿದ ಹಿನ್ನೆಲೆಯಲ್ಲಿ ಈತನ ಪತ್ನಿ ವಿರುದ್ಧವೂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.