ಊಹಾಪೋಹಗಳಿಗೆ ತೆರೆ ಎಳೆಯಲಿದ್ದಾರೆ ಬಿವಿಎನ್

shreedevi
ಶ್ರೀದೇವಿ ನಾಯಕ
Published on

ದೇವದುರ್ಗ: ಮಾಜಿ ಸಂಸದ ಎ.ವೆಂಕಟೇಶ ನಾಯಕ ಕುಟುಂಬದವರು 40 ವರ್ಷಗಳಿಂದ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಮ್ಮ ಕುಟುಂಬಕ್ಕೆ ಕಾಂಗ್ರೆಸ್ಸೇ ಜೀವಾಳವಾಗಿದೆ. ಮಾಜಿ ಸಂಸದ ಬಿ.ವಿ.ನಾಯಕ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ದೇವದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ರಾಜಶೇಖರ ನಾಯಕ ಹೇಳಿದರು.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದರು. ಬಿ.ವಿ.ನಾಯಕ ಬೇರೆ ಪಕ್ಷ ಸೇರುತ್ತಾರೆ ಎನ್ನುವುದು ವದಂತಿಯಾಗಿದ್ದು, ಇದನ್ನು ಯಾರೂ ನಂಬಬಾರದು. ಬಿ.ವಿ.ನಾಯಕ ನನ್ನ ಪರ ಪ್ರಚಾರ ಮಾಡಲಿದ್ದಾರೆ. ಈ ಮೂಲಕ ಎಲ್ಲ ಊಹಾಪೋಹಾಗಳಿಗೆ ತೆರೆ ಎಳೆಯಲಿದ್ದಾರೆ ಎಂದರು.

ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆಯಿದ್ದು, ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲ ನಾಯಕರು, ಕಾರ್ಯಕರ್ತರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡು ಆ ಪಕ್ಷದ ಅಭ್ಯರ್ಥಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಶ್ರೀದೇವಿ ನಾಯಕ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net