

ರಾಯಬಾಗ: ಶಾಸಕ ದುರ್ಯೋಧನ ಐಹೊಳೆ ಆಯೋಜಿಸಿರುವ ಗಾಯನ ಪ್ರತಿಭಾ ಪ್ರಶಸ್ತಿ ಸ್ಪರ್ಧೆ ಗ್ರಾಮೀಣ ಭಾಗದ ಪ್ರತಿಭಾವಂತ ಗಾಯಕರಿಗೆ ವೇದಿಕೆ ಕಲ್ಪಿಸಿದೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಮಹಾವೀರ ಭವನದ ಆವರಣದಲ್ಲಿ ಶಾಸಕ ದುರ್ಯೋಧನ ಐಹೊಳೆ ಅವರ ಜನ್ಮದಿನ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ಐಹೊಳೆ ಗಾಯನ ಪ್ರತಿಭಾ ಪ್ರಶಸ್ತಿ ಸಿಜನ್-8ರ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಸಿ ಸಂಸ್ಕೃತಿ ಉಳಿಸಿ-ಬೆಳೆಸಲು ಎಲ್ಲರೂ ಕೈ ಜೋಡಿಸಬೇಕು ಎಂದರು.
ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಶಾಸಕ ಡಿ.ಎಂ.ಐಹೊಳೆ ಅಧ್ಯಕ್ಷತೆ ವಹಿಸಿದ್ದರು. ನಟಿ ಮಾಲಾಶ್ರೀ, ಆರಾಧನಾ, ಹಿನ್ನೆಲೆ ಗಾಯಕಿ ಡಾ.ಶಮೀತಾ ಮಲ್ನಾಡ, ನಟ, ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ, ತಹಸೀಲ್ದಾರ್ ಸುರೇಶ ಮುಂಜೆ, ಬಸವಪ್ರಸಾದ ಜೊಲ್ಲೆ, ರಿಯಾಜ್ ಚೌಗಲಾ, ಮಹೇಶ ಭಾತೆ, ಭರತೇಶ ಬನವಣೆ, ಮಲ್ಲಪ್ಪ ಮೈಶಾಳೆ, ತಾತ್ಯಾಸಾಹೇಬ ಕಾಟೆ, ಪೃಥ್ವಿರಾಜ ಜಾಧವ, ಅಮಿತ ಜಾಧವ, ವಿಜಯ ಕೋಟಿವಾಲೆ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪುರೆ, ಸದಾನಂದ ಹಳಿಂಗಳಿ, ರಾಜಶೇಖರ ಖನದಾಳೆ, ಅಪ್ಪಾಸಾಹೇಬ ಬ್ಯಾಕೂಡೆ, ಮಹಾದೇವ ಬೊರಗಾಂವೆ, ಅರುಣ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ ಇತರರು ಇದ್ದರು.