ಸಮಾಜ ಅಭಿವೃದ್ಧಿಗೆ ಪತ್ರಕರ್ತರ ಶ್ರಮ ಅಗತ್ಯ: ಶಾಸಕ ಕೃಷ್ಣನಾಯ್ಕ ಹೇಳಿಕೆ

hdl
ಹೂವಿನಹಡಗಲಿಯ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೃಷ್ಣನಾಯ್ಕ ಮಾತನಾಡಿದರು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ, ಉಪಾಧ್ಯಕ್ಷ ಕಿಚಿಡಿ ಕೊಟ್ರೇಶ್, ತಾಲೂಕು ಅಧ್ಯಕ್ಷ ಎಂ.ನಿಂಗಪ್ಪ, ಇತರರಿದ್ದರು.
Published on

ಹೂವಿನಹಡಗಲಿ: ಪತ್ರಕರ್ತರು ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದರ ಜತೆಗೆ ಅನ್ಯಾಯದ ವಿರುದ್ಧ ಹೋರಾಡಿ ನೊಂದವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.


ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಶನಿವಾರ ಆಯೋಜಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.


ಇದುವರೆಗೆ ಆಡಳಿತ ನಡೆಸಿದ ಸರ್ಕಾರಗಳು ಮಾಧ್ಯಮದವರಿಗಾಗಿ ಯಾವುದೇ ಯೋಜನೆ ಜಾರಿಗೆ ತರಲಿಲ್ಲ. ಸರ್ಕಾರದ ಕರ್ತವ್ಯ ಹೆಚ್ಚಿಸಲು ಮಾಧ್ಯಮಗಳು ಮುಂದಾಗಿವೆ. ಅಲ್ಲದೆ ಜನರ ಮನಸ್ಸು ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ. ಜನರ ಸಮಸ್ಯೆಗಳಿಗಾಗಿ ಹಗಲಿರುಳು ದುಡಿಯುವ ಪರ್ತಕರ್ತರಿಗೆ ಬಸ್‌ಪಾಸ್ ಇತರ ಸೌಲಭ್ಯಗಳನ್ನು ನೀಡುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.


ಪತ್ರಕರ್ತ ಸೋಮರೆಡ್ಡಿ ಅಳವಂಡಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ರಾಜಕಾರಣಿ, ಅಧಿಕಾರಿಗಳ ನಡುವೆ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಮಾಧ್ಯಮ ಕ್ಷೇತ್ರವನ್ನು ನಾವೇ ಆಯ್ಕೆ ಮಾಡಿಕೊಳ್ಳುವ ಮೂಲಕ ಪತ್ರಕರ್ತರಾಗುತ್ತೇವೆ. ಅದಕ್ಕೆ ಮೊದಲು ನಮಗೆ ಬದ್ಧತೆ ಇರಬೇಕು ಎಂದರು.


ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಕ್ಕಿ ಶಿವಕುಮಾರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ಮಾತನಾಡಿದರು. ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಜಿಬಿಆರ್ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಪಾಟೀಲ, ಕಾನಿಪ ರಾಜ್ಯ ಸಮಿತಿ ಸದಸ್ಯ ಕೆ.ಲಕ್ಷ್ಮಣ, ಜಿಲ್ಲಾ ಕಾರ್ಯದರ್ಶಿ ವೆಂಕೋಬ ನಾಯಕ, ಜಿಲ್ಲಾ ಉಪಾಧ್ಯಕ್ಷ ಕಿಚಿಡಿ ಕೊಟ್ರೇಶ್, ತಾಲೂಕು ಅಧ್ಯಕ್ಷ ಎಂ.ನಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net