ಶಿರಸಿ: ತಾಲೂಕಿನ ಪಶ್ಚಿಮ ಭಾಗದ 22 ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ತಾಲೂಕಾಧ್ಯಕ್ಷರಾಗಿ ಇಸಳೂರು ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.
ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಹುಲೇಕಲ್ ಗ್ರಾಪಂ ಅಧ್ಯಕ್ಷ ಖಾಸೀಂ ಸಾಬ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ನಡೆಯಿತು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಯಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರವೀಶ ಹೆಗಡೆ ಮಾಳೇನಳ್ಳಿ, ರಾಜ್ಯ ಸಮಿತಿಯ ಸದಸ್ಯರಾಗಿ ಕುಳವೆ ಗ್ರಾಮ ಪಂಚಾಯಿತಿ ಸದಸ್ಯ ಸಂದೇಶ ಭಟ್ ಬೆಳಖಂಡ, ಜಿಲ್ಲಾ ಸಮಿತಿಯ ಸದಸ್ಯರಾಗಿ ಕೋಡ್ನಗದ್ದೆ ಗ್ರಾಪಂ ಸದಸ್ಯ ಪ್ರವೀಣ ಹೆಗಡೆ ಮಣ್ಮನೆ, ಭೈರುಂಬೆ ಗ್ರಾಪಂ ಸದಸ್ಯ ಪ್ರಕಾಶ ಹೆಗಡೆ ಹಲಗೆ ಮತ್ತು ತಾಲೂಕು ಸಮಿತಿಯ ಉಪಾಧ್ಯಕ್ಷರಾಗಿ ಸೋಂದಾ ಗ್ರಾಪಂ ಸದಸ್ಯೆ ಸವಿತಾ ಚನ್ನಯ್ಯ, ಸಾಲ್ಕಣಿ ಗ್ರಾಪಂ ಸದಸ್ಯೆ ಸುಮಾ ಹೆಗಡೆ, ವಾನಳ್ಳಿ ಗ್ರಾಪಂ ಸದಸ್ಯ ಜಯರಾಮ ಹೆಗಡೆ, ದೇವನಹಳ್ಳಿ ಗ್ರಾಪಂ ಸದಸ್ಯ ನಾರಾಯಣ ಹೆಗಡೆ, ಖಜಾಂಚಿಯಾಗಿ ಹುಲೇಕಲ್ ಗ್ರಾಪಂ ಸದಸ್ಯ ಮಂಜು ಪೂಜಾರಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಒಕ್ಕೂಟದ ರಾಜ್ಯ ಸಮಿತಿಯ ಅಡಿ ಶಿರಸಿ ತಾಲೂಕಿನ ಒಕ್ಕೂಟ ಕಾರ್ಯನಿರ್ವಹಿಸಲಿದ್ದು, ಆಯ್ಕೆ ಪ್ರಕ್ರಿಯೆಯನ್ನು ಒಕ್ಕೂಟದ ಜಿಲ್ಲಾ ಸಂಚಾಲಕ ಎಂ.ಕೆ. ಭಟ್ ಯಲ್ಲಾಪುರ ಹಾಗೂ ಜಿಲ್ಲಾ ಸಮಿತಿ ಸದಸ್ಯ ಗಣೇಶ ಹೆಗಡೆ ನಡೆಸಿಕೊಟ್ಟರು.