

ಬೆಳಗಾವಿ: ಲಾಕ್‌ಡೌನ್‌ನಿಂದ ಕೆಲಸ ಮಾಡುತ್ತಿರುವ ಸ್ಥಳದಲ್ಲೇ ಸಿಲುಕಿಕೊಂಡಿರುವ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ತುದಿಗಾಲ ಮೇಲೆ ನಿಂತಿದ್ದಾರೆ.
ಕಾರ್ಮಿಕರು ಸ್ವಂತ ಊರುಗಳಿಗೆ ಹೋಗುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕರು ಜಮಾಯಿಸಿದರು. ತಮ್ಮ ಊರುಗಳಿಗೆ ಹೋಗುವುದಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಈ ವೇಳೆ ಡಿಸಿ ಕಚೇರಿ ಅಧಿಕಾರಿಗಳು ಮೇ 3ರ ಬಳಿಕ ತಮ್ಮ ಊರುಗಳಿಗೆ ಕಳುಹಿಸಲು ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ಜಿಲ್ಲಾಧಿಕಾರಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಅಂತರ ಮರೆತ ಕಾರ್ಮಿಕರು: ಶುಕ್ರವಾರ ಮಧ್ಯಾಹ್ನ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕರು ಜಮಾ ಯಿಸಿದ್ದರಿಂದ ಅಧಿಕಾರಿಗಳಲ್ಲಿ ಅಳುಕುಂಟಾಯಿತು. ಸಾಮಾ ಜಿಕ ಅಂತರ ಕಾಯ್ದು ಕೊಳ್ಳುವಂತೆ ಅಧಿಕಾರಿಗಳು ಎಲ್ಲೆಡೆ ಜಾಗೃತಿ ಮೂಡಿಸುತ್ತಿದ್ದಾರೆ. ಇದರ ಮಧ್ಯೆಯೇ ಕಾರ್ಮಿಕರ ಗುಂಪು ಕಂಡು ಅಧಿಕಾರಿಗಳಿಗೆ ತಲೆಬಿಸಿಯಾ ಗಿತ್ತು. ಬಳಿಕ ಪೊಲೀಸರು ಕಾರ್ಮಿಕರನ್ನು ಬಿಡಿ ಬಿಡಿಯಾಗಿ ನಿಲ್ಲಿಸಿದರು.