ಮತದಾರರಿಗೆ ಜಾಗೃತಿ ಮೂಡಿಸಿ

Sandru Election
ಕೃಷ್ಣಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಮಾನ್ಯ ವೀಕ್ಷಕ ಎಸ್.ಚಂದ್ರಶೇಖರ ಗುರುವಾರ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಅನಿಲ್ ಕುಮಾರ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಎಚ್.ಷಡಕ್ಷರಯ್ಯ, ಪಿಎಸ್‌ಐ ವೀರೇಶ್ ಇದ್ದರು.
Published on

ಸಂಡೂರು: ಮತಗಟ್ಟೆಗಳಲ್ಲಿ ಕುಡಿವ ನೀರು, ಶೌಚಗೃಹ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಚುನಾವಣೆ ಸಾಮಾನ್ಯ ವೀಕ್ಷಕ ಎಸ್.ಚಂದ್ರಶೇಖರ ಸೂಚಿಸಿದರು.

ತಾಲೂಕಿನ ವಿವಿಧ ಮತ ಕೆಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಬೇಕು. ಈ ಮೂಲಕ ಶೇ.90ರಿಂದ 95ರವರೆಗೆ ಮತದಾನ ಆಗುವಂತೆ ನೋಡಿಕೊಳ್ಳಬೇಕು ಎಂದರು.

ತೋರಣಗಲ್‌ನ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿಪ್ರಾ ಶಾಲೆ, ನರಸಿಂಗಾಪುರದ ಸರ್ಕಾರಿ ಹಿಪ್ರಾ ಶಾಲೆ, ಕೃಷ್ಣಾನಗರದ ಆದರ್ಶ ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿಪ್ರಾ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಬಿಎಲ್‌ಒಗಳಿಂದ ಮಾಹಿತಿ ಪಡೆದರು. ತಹಸೀಲ್ದಾರ್ ಅನಿಲ್ ಕುಮಾರ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಎಚ್.ಷಡಕ್ಷರಯ್ಯ, ಕುರೇಕುಪ್ಪ ಪುರಸಭೆ ಮುಖ್ಯಾಧಿಕಾರಿ ಸತೀಶ್ ಗುಡ್ಡೆ, ಕೃಷಿ ಇಲಾಖೆಯ ರಾಘವೇಂದ್ರ, ಪಿಎಸ್‌ಐಗಳಾದ ವೀರೇಶ್, ಸಣ್ಣ ವೀರೇಶ್, ಕೃಷ್ಣಾನಗರ ಸರ್ಕಾರಿ ಹಿಪ್ರಾ ಶಾಲೆ ಮುಖ್ಯಶಿಕ್ಷಕ ಸೈಫುಲ್ಲಾ ಖಾದರ್, ಪಿಡಿಒ ಗುರುಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net