ರೈತ-ಕಾರ್ವಿುಕ ವಿರೋಧಿ ನೀತಿ ಕೈಬಿಡಲು ಒತ್ತಾಯ

h9-protest
Published on

ಹುಬ್ಬಳ್ಳಿ: ಕ್ವಿಟ್ ಇಂಡಿಯಾ ಚಳವಳಿ ದಿನ ನಿಮಿತ್ತ ಕೇಂದ್ರ ಸರ್ಕಾರದ ರೈತ-ಕಾರ್ವಿುಕ ವಿರೋಧಿ ನೀತಿಗಳ ವಿರುದ್ಧ ಕೇಂದ್ರ ಕಾರ್ವಿುಕ ಸಂಘಟನೆಗಳು ದೇಶವ್ಯಾಪಿ ಧರಣಿ ನಡೆಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಕಾರ್ವಿುಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಧಾರವಾಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿವಿಧಾನಸೌಧದ ಎದುರು ಬುಧವಾರ ಧರಣಿ ನಡೆಸಲಾಯಿತು.

ದೇಶದ ಕಾರ್ವಿುಕರನ್ನು ನವಗುಲಾಮಗಿರಿಗೆ ತಳ್ಳಲಿರುವ ಕಾರ್ವಿುಕ ಸಂಹಿತೆಗಳನ್ನು ರದ್ದುಪಡಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿರುವ ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ, ಮಾರಾಟ ನಿಲ್ಲಿಸಬೇಕು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಮಾಡಬೇಕು. ಜನವಿರೋಧಿ ವಿದ್ಯುತ್ ಶಕ್ತಿ ಮಸೂದೆ 2020 ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಿರತರು ಒತ್ತಾಯಿಸಿದರು. ನಂತರ ತಹಸೀಲ್ದಾರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ರವಾನಿಸಲಾಯಿತು.

ಮುಖಂಡರಾದ ಮಹೇಶ ಪತ್ತಾರ, ಅಶೋಕ ರ್ಬಾ, ಎ.ಎಸ್. ಪೀರಜಾದೆ, ಆರ್.ಎಫ್. ಕವಳಿಕಾಯಿ, ಬಸೀರ ಮುಧೋಳ, ಬಿ.ಎಸ್. ಸೊಪ್ಪಿನ, ಬಿ.ಎನ್. ಪೂಜಾರಿ, ಬಿ.ಐ. ಈಳಿಗೇರ, ಎಂ.ಎಚ್. ಮುಲ್ಲಾ, ರಮೇಶ ಬೋಸ್ಲೆ, ಎ.ಎಂ.ಖಾನ್, ಗುರುಸಿದ್ದಪ್ಪ ಅಂಬಿಗೇರ, ಬಸವಣ್ಣೆಪ್ಪ ನೀರಲಗಿ, ಮಹೇಶ ಹುಲಗೋಡ, ಖಾಜಾ ಬಿಸ್ತಿ, ವಿನೋದ ವೀರಾಪೂರ, ಕಿರಣ ಜೂಜಾರ, ಸಿಐಟಿಯು, ಎಐಟಿಯುಸಿ, ಟಿಯುಸಿಸಿ, ಎಐಐಇಎ ಮುಂತಾದ ಸಂಘಟನೆಗಳ ಸದಸ್ಯರು ಧರಣಿಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net